ಸಂಸ್ಕಾರಯುತವಾದ ನಡವಳಿಕೆಯಿಂದ ಸಮಾಜದಲ್ಲಿ ಉನ್ನತಿ ಸಾಧ್ಯ ಎಂದು ಶ್ರೀ ಕ್ಷೇತ್ರ ಬಲ್ಯೋಟ್ಟುವಿನ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು. ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರ ಸನ್ನಿಧಿಯಲ್ಲಿ ಶ್ರೀ ದೇವರ ಪ್ರತಿಷ್ಠಾ ಚತುರ್ಥ ವರ್ಧಂತ್ಯುತ್ಸವದಲ್ಲಿ ಅವರು ಆಶೀರ್ವಚನ ನೀಡಿದರು.
www.bantwalnews.com report
ಮನುಷ್ಯನಿಗೆ ಬಾಲ್ಯದಲ್ಲೇ ಭಾರತೀಯ ಸಂಸ್ಕಾರದ ಅರಿವು ಮೂಡಿಸಬೇಕಾಗಿರುವುದು ಹೆತ್ತವರ ಕರ್ತವ್ಯ. ಶಾಲೆಗಳಲ್ಲೂ ಇದರ ಮಹತ್ವ ಸಾರಬೇಕು ಎಂದು ಸ್ವಾಮೀಜಿ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ ವಿಜ್ಞಾನ ಮತ್ತು ತಂತ್ರಜ್ಞಾನ ಡೀನ್ ಪ್ರೊ. ಜತ್ತಿ ಈಶ್ವರ ಭಟ್ಟ ಮಾತನಾಡಿ ನಾವು ಪ್ರಶ್ನಿಸುವ ಗುಣ ಹೊಂದಿದರೆ, ಪ್ರಾಚೀನ ಪರಂಪರೆಯ ವೈಜ್ಞಾನಿಕ ಸತ್ಯ ಅನಾವರಣವಾಗುತ್ತದೆ ಎಂದರು.
ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಧಾರ್ಮಿಕ ಉಪನ್ಯಾಸ ನೀಡಿದರು. ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಸದಾನಂದ ಪೆರ್ಲ, ಶ್ರೀರಾಮಚಂದ್ರಾಪುರ ಮಠದ ಮುಖ್ಯ ಕಾರ್ಯನಿರ್ವಾಹಕ ಕೆ.ಜಿ.ಭಟ್ಟ, ಶ್ರೀರಾಮ ವಿದ್ಯಾಕೇಂದ್ರ ಸಂಚಾಲಕ ವಸಂತ ಮಾಧವ, ಉದ್ಯಮಿ ಕೆ.ಸುಬ್ರಹ್ಮಣ್ಯ ಭಟ್ಟ ಮುಖ್ಯ ಅತಿಥಿಗಳಾಗಿದ್ದರು. ಎನ್. ಶಿವರಾಮ ಭಟ್ಟ ಸ್ವಾಗತಿಸಿದರು. ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ಪ್ರಸ್ತಾವನೆ ನೀಡಿದರು.ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ಸೇರಾಜೆ ಸುಬ್ರಹ್ಮಣ್ಯ ಭಟ್, ಕಲ್ಲಡ್ಕ ಹವ್ಯಕ ವಲಯ ಅಧ್ಯಕ್ಷ ಯು.ಎಸ್.ಚಂದ್ರಶೇಖರ ಭಟ್, ಸೇವಾ ಸಮಿತಿ ಗೌರವಾಧ್ಯಕ್ಷ ಸಿ.ವಿ.ಗೋಪಾಲಕೃಷ್ಣ ಉಪಸ್ಥಿತರಿದ್ದರು. ಉಷಾ ಪ್ರಭಾಕರ್ ವಂದಿಸಿದರು. ಮುರಳೀಕೃಷ್ಣ ಕುಕ್ಕಿಲ ಕಾರ್ಯಕ್ರಮ ನಿರೂಪಿಸಿದರು.
ಇದಕ್ಕೂ ಮುನ್ನ ಕ್ಷೇತ್ರದಲ್ಲಿ ಶತರುದ್ರ ಜಪ, ಸಾಮೂಹಿಕ ಕುಂಕುಮಾರ್ಚನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.