ಶಿಕ್ಷಣವು ನಮ್ಮಲ್ಲಿರುವ ಸೃಜನಶೀಲವಾದ ಶಕ್ತಿ ವಿಶೇಷಗಳನ್ನು, ಸುಪ್ತವಾದ ಪ್ರತಿಭೆಗಳನ್ನು ಸಮಾಜದ ಮುಂದೆ ಅನಾವರಣಗೊಳಿಸುವ ಆಯುಧ. ವಿದ್ಯೆ ಮಾನವನ ಜೀವನಕ್ಕೆ ಸಹಾಯಕಾರಿಯಾದ ಉಪಕರಣ ಎಂದು ಖ್ಯಾತ ಯಕ್ಷಗಾನ ಕಲಾವಿದ ಜಬ್ಬಾರ್ ಸಮೋ ಹೇಳಿದರು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿ ಸಂಘ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜುಗಳ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕ ಡಾ. ಮಂಜುನಾಥ ಉಡುಪ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಲೆ. ಸುಂದರ್ ಬಹುಮಾನ ವಿತರಣಾ ಕಾರ್ಯಕ್ರಮ ನಿರ್ವಹಿಸಿದರು.
ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮೇಧಾ ರಾಮಕುಂಜ ಮತ್ತು ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಪೂರ್ವ ಸಂಘಗಳ ವರದಿ ಮಂಡಿಸಿದರು. ಪದವಿ ಕಾಲೇಜಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೀಷ್ ಪಿ. ಸ್ವಾಗತಿಸಿ, ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶರಣ್ಯ ಅತಿಥಿ ಪರಿಚಯ ಮಾಡಿ, ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ಕಾಜಲ್ ಪಿ.ಎಚ್. ವಂದಿಸಿದರು. ಶ್ಯಾಮಲಾ ಕಾರ್ಯಕ್ರಮ ನಿರೂಪಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಹಾಗೂ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ.ಕೆ., ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ವಿನೀತ್ ಬಿ. ಮತ್ತು ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ರಿಚಾ ಶಿಫಾಲಿ ಡಿ’ಸೋಜಾ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Be the first to comment on "ಎಸ್.ವಿ.ಎಸ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ದಿನಾಚರಣೆ"