ಎಸ್.ವಿ.ಎಸ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ದಿನಾಚರಣೆ

ಶಿಕ್ಷಣವು ನಮ್ಮಲ್ಲಿರುವ ಸೃಜನಶೀಲವಾದ ಶಕ್ತಿ ವಿಶೇಷಗಳನ್ನು, ಸುಪ್ತವಾದ ಪ್ರತಿಭೆಗಳನ್ನು ಸಮಾಜದ ಮುಂದೆ ಅನಾವರಣಗೊಳಿಸುವ ಆಯುಧ. ವಿದ್ಯೆ ಮಾನವನ ಜೀವನಕ್ಕೆ ಸಹಾಯಕಾರಿಯಾದ ಉಪಕರಣ ಎಂದು ಖ್ಯಾತ ಯಕ್ಷಗಾನ ಕಲಾವಿದ ಜಬ್ಬಾರ್ ಸಮೋ ಹೇಳಿದರು.

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿ ಸಂಘ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜುಗಳ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು

ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕ ಡಾ. ಮಂಜುನಾಥ ಉಡುಪ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಲೆ. ಸುಂದರ್ ಬಹುಮಾನ ವಿತರಣಾ ಕಾರ್ಯಕ್ರಮ ನಿರ್ವಹಿಸಿದರು.

ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮೇಧಾ ರಾಮಕುಂಜ ಮತ್ತು ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಪೂರ್ವ ಸಂಘಗಳ ವರದಿ ಮಂಡಿಸಿದರು. ಪದವಿ ಕಾಲೇಜಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೀಷ್ ಪಿ. ಸ್ವಾಗತಿಸಿ, ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶರಣ್ಯ ಅತಿಥಿ ಪರಿಚಯ ಮಾಡಿ, ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ಕಾಜಲ್ ಪಿ.ಎಚ್. ವಂದಿಸಿದರು. ಶ್ಯಾಮಲಾ ಕಾರ್ಯಕ್ರಮ ನಿರೂಪಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಹಾಗೂ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ.ಕೆ., ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ವಿನೀತ್ ಬಿ. ಮತ್ತು ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ರಿಚಾ ಶಿಫಾಲಿ ಡಿಸೋಜಾ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಎಸ್.ವಿ.ಎಸ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*