ಕನ್ನಡ ವಿಶ್ವವಿದ್ಯಾಲಯ ಹಂಪಿ, ಭಾಷಾಂತರ ಅಧ್ಯಯನ ವಿಭಾಗ ವಿದ್ಯಾರಣ್ಯ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಆಶ್ರಯದಲ್ಲಿ ಅಮ್ಮೆಂಬಳ ಶಂಕರನಾರಾಯಣ ನಾವಡ ದತ್ತಿ ಉಪನ್ಯಾಸ ಫೆ.10ರಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.
ಎಂ.ಗೋವಿಂದ ಪೈ ಅವರ ಅನುವಾದಗಳು ಎಂಬ ವಿಷಯದ ಬಗ್ಗೆ ಬೆಟ್ಟಂಪಾಡಿ ಸರಕಾರಿ ಪ್ರ.ದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ವರದರಾಜ ಚಂದ್ರಗಿರಿ ಉಪನ್ಯಾಸ ನೀಡುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ತಾಲೂಕು ಅಧ್ಯಕ್ಷ ಮೋಹನ ರಾವ್ ವಹಿಸುವರು. ಕವಿವಿ ಹಂಪಿ ಪ್ರಾಧ್ಯಾಪಕ ಡಾ.ಎ.ಮೋಹನ ಕುಂಟಾರು ಪ್ರಾಸ್ತಾವಿಕ ಮಾತುಗಳನ್ನಾಡುವರು. ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎ.ವಿ.ನಾವಡ ದತ್ತಿ ದಾನಿಗಳ ಪರಿಚಯಿಸುವರು ಎಂದು ಕಸಾಪ ಪ್ರಕಟಣೆ ತಿಳಿಸಿದೆ.
Be the first to comment on "ಗೋವಿಂದ ಪೈ ಅನುವಾದಗಳು: ದತ್ತಿ ಉಪನ್ಯಾಸ"