ಬಂಟ್ವಾಳ

ಗೋವಿಂದ ಪೈಗಳ ಸಾಧನೆಯ ಅರಿವು ಇಂದಿನ ಪೀಳಿಗೆಗೆ ಅಗತ್ಯ

www.bantwalnews.com report

 ಮಂಜೇಶ್ವರ  ಗೋವಿಂದ ಪೈಗಳು ಕರಾವಳಿಯ ಪಂಡಿತ ಪರಂಪರೆಯ ಮುಂಚೂಣಿಯಲ್ಲಿದ್ದವರು ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ವರದರಾಜ ಚಂದ್ರಗಿರಿ ಹೇಳಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಶುಕ್ರವಾರ ಏರ್ಪಡಿಸಿದ ಅಮ್ಮೆಂಬಳ ಶಂಕರನಾರಾಯಣ ನಾವಡ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಂಜೇಶ್ವರ ಗೋವಿಂದ ಪೈ ಅವರ ಅನುವಾದಗಳು ಎಂಬ ವಿಷಯದ ಬಗ್ಗೆ ಅವರು ಮಾತನಾಡಿದರು.

ಗೋವಿಂದ ಪೈಗಳ ಕುರಿತು ಇಂದಿನ ಪೀಳಿಗೆ ಅರಿತುಕೊಳ್ಳಬೇಕಾದದ್ದು ಹಾಗೂ ಅವರ ಬದುಕಿನ ಅಧ್ಯಯನ ನಡೆಸಬೇಕಾದ ಅಗತ್ಯವಿದೆ. ಪೈಗಳು 22 ಭಾಷೆಗಳನ್ನು ಬಲ್ಲವರಾಗಿದ್ದು, ಕರಾವಳಿಯ ಸಾಹಿತ್ಯ ಪರಂಪರೆಯಲ್ಲಿ ಅಗ್ರಮಾನ್ಯರ ಸಾಲಿನಲ್ಲಿದ್ದರು ಎಂದ ಡಾ.ಚಂದ್ರಗಿರಿ, ಅವರು ಮಹಾನ್ ದೇಶಭಕ್ತರಾಗಿದ್ದರು. ರಚಿಸಿದ ಸುಮಾರು 165 ಪದ್ಯಗಳಲ್ಲಿ ಬಹುಪಾಲು ದೇಶಭಕ್ತಿಯ ಕುರಿತಾಗಿತ್ತು ಎಂಬುದು ಗಮನಾರ್ಹ ಅಂಶ. ಇಂಗ್ಲೀಷ್ ಭಾಷೆಯ ಅನುವಾದ ಸಾಹಿತ್ಯ ಮಾಡಿದರೂ ಅವರು ಇಂಗ್ಲೀಷರನ್ನು ಭಾರತದಿಂದ ಓಡಿಸುವ ಕೈಂಕರ್ಯದಲ್ಲಿ ತೊಡಗಿದ್ದರು ಎಂದು ಚಂದ್ರಗಿರಿ ವಿವರಿಸಿದರು.

ಹೊಸ ಬೆಳಕಿನಲ್ಲಿ ಸಮಾಜವನ್ನು ನೋಡುವ ಅಗತ್ಯವನ್ನ ಪೈಗಳು ತಮ್ಮ ಕೃತಿಗಳಲ್ಲಿ ಉಲ್ಲೇಖಿಸುತ್ತಿದ್ದರು. ಜ್ಞಾನ ಬಳಸುವ ಮೂಲಕ ನಮ್ಮ ರಾಷ್ಟ್ರವನ್ನು ಮತ್ತೊಮ್ಮೆ ನೋಡುವ ಅವಶ್ಯವಿದೆ ಎಂಬುದನ್ನು ಪೈಗಳು ಸಾರಿದ್ದರು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಪಡಾರು ಮಹಾಬಲೇಶ್ವರ ಭಟ್ ವಹಿಸಿದ್ದರು. ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಎ.ವಿ.ನಾವಡ, ಅಮ್ಮೆಂಬಳ ಸುಬ್ಬಣ್ಣ ನಾವಡ ಉಪಸ್ಥಿತರಿದ್ದರು. ಹಂಪಿ ವಿವಿ ಪ್ರಾಧ್ಯಾಪಕ ಡಾ.ಎ.ಮೋಹನ ಕುಂಟಾರು ಸ್ವಾಗತಿಸಿದರು. ಕನ್ನಡ ಭವನ ಕಟ್ಟಡ ಸಮಿತಿ ಅಧ್ಯಕ್ಷ ಕೊಳಕೆ ಗಂಗಾಧರ ಭಟ್ ವಂದಿಸಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಅಜಕ್ಕಳ ಗಿರೀಶ ಭಟ್ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts