ಬಂಟ್ವಾಳ

ರ್‍ಯಾಂಕ್ ವಿಜೇತೆಗೆ ಸನ್ಮಾನ

ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ  ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ, ಬಿ.ಸಿ.ರೋಡು 16ನೇ ವರ್ಷದ ವಾರ್ಷಿಕ ವರ್ಧಂತಿಯ ಪ್ರಯುಕ ಶ್ರೀ ಸತ್ಯನಾರಾಯಣ ಪೂಜೆ, ಬಹುಮಾನ ವಿತರಣೆ ಮತ್ತು ಸನ್ಮಾನ ಕಾರ್‍ಯಕ್ರಮ .

ಮಂಗಳೂರು ವಿಶ್ವವಿದ್ಯಾನಿಲಯದ 2016 ರ ಮೇ ತಿಂಗಳಿನಲ್ಲಿ ಜರಗಿದ ಬಿ.ಎಸ್ಸಿ. ಪದವಿ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಗಳಿಸಿದ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ವಿದ್ಯಾರ್ಥಿನಿಯಾದ ಕಾವ್ಯ ಕೆ. ನಾಯಕ್ ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಜಾಹೀರಾತು

ಮುಖ್ಯ ಅತಿಥಿಗಳಾಗಿ ಸಾಹಿತಿ ಕಾಸರಗೋಡು ಅಶೋಕ್ ಕುಮಾರ್ ಕಾಮತ್, ಡಾ. ವಿಶ್ವನಾಥ ನಾಯಕ್ ಪಿ., ಭಾಗವಹಿಸಿ ಸಮಿತಿಯ  ಕಾರ್ಯಚಟುವಟಿಕೆಗಳ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅಧ್ಯಕ್ಷ ಹೆಚ್. ಮಾಧವ ಭಟ್ ಉಪಸ್ಥಿತರಿದ್ದರು.

ಕಾರ್ಯದರ್ಶಿ ಯು. ಸುರೇಶ್ ನಾಯಕ್ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವನೆಗೈದರು, ಕೆ. ಗೋಪಾಕೃಷ್ಣ ಪ್ರಭು ವಂದಿಸಿದರು. ಕೋಶಾಧಿಕಾರಿ ಎನ್. ಶ್ರೀಧರ ಶೆಣೈ ಬಹುಮಾನ ವಿತರಣೆ ಕಾರ್‍ಯಕ್ರಮ ನಿರ್ವಹಿಸಿದರು. ಜತೆ ಕಾರ್ಯದರ್ಶಿ ಎಚ್. ನಾರಾಯಣ ಶೆಣೈ, ರಘುವೀರ್ ಕಾಮತ್ ಮತ್ತಿತರರು ಸಹಕರಿಸಿದರು. ಜತೆಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಪೈ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts