ಏಕಾಗ್ರತೆ ಮತ್ತು ಶ್ರದ್ಧೆಯಿಂದ ನಾವು ಕಲಿತರೆ ಯಶಸ್ಸು ಖಂಡಿತ ಎಂದು ಶ್ರೀ ರಾಮಕೃಷ್ಣ ಆಶ್ರಮ ಮಂಗಳೂರು ಅಧ್ಯಕ್ಷ ಶ್ರೀ ಜಿತಕಾಮಾನಂದಜೀ ಹೇಳಿದರು.
ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಸರಸ್ವತಿ ಪೂಜೆಯಲ್ಲಿ ಅವರು ಭಾಗವಹಿಸಿ ಮಾತನಾಡಿ, ನಮ್ಮಲ್ಲಿರುವ ಪ್ರತಿಭೆ ಹೊರಬರಬೇಕಾದರೆ ಸರಸ್ವತಿ ಅನುಗ್ರಹ ಅತಿ ಅಗತ್ಯ ಎಂದರು.
ವ್ಯಕ್ತಿತ್ವ ವಿಕಸನ ತರಬೇತುದಾರ ಬೆಂಗಳೂರಿನ ಪ್ರೊ.ರಘೋತ್ತಮರಾವ್ ಅಧ್ಯಕ್ಷತೆ ವಹಿಸಿದ್ದರು. ಮಾತೃಭಾಷೆ ಶಿಕ್ಷಣ ಪಡೆದರೆ ಅತ್ಯುತ್ತಮ ಎಂಬುದು ವಿಜ್ಞಾನಿಗಳು ತಿಳಿಸಿದ್ದಾರೆ ಎಂದು ಅವರು ಹೇಳಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ವಿದ್ಯಾಕೇಂದ್ರ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ ಉಪಸ್ಥಿತರಿದ್ದರು.
ಬೆಳಗ್ಗೆ ವಿದ್ಯಾಕೇಂದ್ರ ವಸುಧಾರಾ ಗೋಶಾಲೆಯಲ್ಲಿ ಗೋಸೂಕ್ತ ಹೋಮದ ಬಳಿಕ ವಿದ್ಯಾಕೇಂದ್ರದ ಮೈದಾನದಲ್ಲಿ ಸರಸ್ವತಿ ಪೂಜೆ ನಡೆಯಿತು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಏಕಾಗ್ರತೆ, ಶ್ರದ್ಧೆಯಿಂದ ಯಶಸ್ಸು: ಶ್ರೀಜಿತಕಾಮಾನಂದಜೀ"