ಬಂಟ್ವಾಳ

ಇರಾ: ಕ್ಲಸ್ಟರ್ ಮಟ್ಟದ ಕಲಿಕೋತ್ಸವ

ಇರಾ ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕೋತ್ಸವ ನಡೆಯಿತು.

1ರಿಂದ 8ನೇ ತರಗತಿವರೆಗೆ ಒಟ್ಟು 24 ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಇರಾ ಕ್ಲಸ್ಟರ್ ಗೆ ಒಳಪಟ್ಟ ಆರು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಾಹೀರಾತು

ಸಮಾರೋಪ ಸಮಾರಂಭದಲ್ಲಿ ಗ್ರಾಪಂ ಅಧ್ಯಕ್ಷ ಅಬ್ದುಲ್ ರಜಾಕ್ ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಇರಾ ಶಾಲೆ ಎಸ್.ಡಿ.ಎಂ.ಸಿ. ಅಧ್ಯಕ್ಷ

ಮುರಳೀಧರ ಭಂಡಾರಿ,  ಇರಾ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ರವಿ ಕುಮಾರ್ ಮತ್ತು ಇರಾ ಶಾಲಾ ಮುಖ್ಯ ಶಿಕ್ಷಕಿ ಸುಜಾತ ಟಿ.ಎಸ್. ಮತ್ತು 5 ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಇರಾ ಶಾಲಾ ಸುರಕ್ಷಾ ಸಮಿತಿಯ ಅಧ್ಯಕ್ಷೆ ಜ್ಯೋತಿ  ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ 72 ವಿದ್ಯಾರ್ಥಿಗಳಿಗೆ ಈ ಸಂದರ್ಭ ಅತಿಥಿಗಳು ಬಹುಮಾನ ವಿತರಿಸಿದರು.

ಜಾಹೀರಾತು

ಸುಜಾತ ಟಿ.ಎಸ್.ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿ ರವಿ ಕುಮಾರ್ ವಂದಿಸಿದರು. ಇರಾ ಶಾಲಾ ಸಹ ಶಿಕ್ಷಕ ಜಾನ್ ಆಂಥೋನಿ ಫೆರ್ನಾಂಡಿಸ್ ಬಹುಮಾನ ವಿತರಣೆ ಕಾರ್ಯಕ್ರಮ ನಿರ್ವಹಿಸಿದರು. ಇರಾ ಪರಪ್ಪು ಶಾಲಾ ಶಿಕ್ಷಕ ಯತೀಶ್ ಪಿ ಕಾರ್ಯಕ್ರಮ ನಿರೂಪಿಸಿದರು. ಇರಾ ಶಾಲಾ ದೈಹಿಕ ಶಿಕ್ಷಕಿ ಶಶಿ ಬಿ.ಸಹಕರಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ