ಕಲ್ಲಡ್ಕ

ತಾಲೂಕು ಮಟ್ಟದ ರಾಷ್ಟ್ರೀಯ ಜಂತುಹುಳ ನಿವಾರಣಾ ಅಭಿಯಾನ ಉದ್ಘಾಟನೆ

ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಯಶಸ್ಸಿಗೆ ಮಕ್ಕಳ ಹೆತ್ತವರು ಹಾಗೂ ಸಮುದಾಯ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ದೊಡ್ಡಕೆಂಪಯ್ಯ ಹೇಳಿದರು.


ಕಲ್ಲಡ್ಕದ ಮಾದರಿ ಹಿ.ಪ್ರಾ.ಶಾಲೆಯಲ್ಲಿ  ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಜಂತುಹುಳ ನಿವಾರಣಾ ಅಭಿಯಾನವನ್ನು ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಎಲ್ಲಾ ಮಕ್ಕಳ ಆರೋಗ್ಯ ಸರ್ಕಾರದ ಜವಬ್ದಾರಿಯಾಗಿದ್ದು, ಕಾಲಕಾಲಕ್ಕೆ ವಿವಿಧ ಕಾರ್ಯಕ್ರಮಗಳ ಮೂಲಕ ಜನಜಾಗೃತಿಮೂಡಿಸಲಾಗುತ್ತಿದೆ ಎಂದ ಅವರು, ಪ್ರತೀ ವಿಚಾರಗಳ ಕುರಿತಾಗಿ ಹೆತ್ತವರು ನೈಜತೆಯನ್ನು ಅರಿತು ಮಕ್ಕಳ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವಂತೆ ಅವರು ಮನವಿಮಾಡಿದರು.
ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ ವಿಶ್ವಕರ್ಮ ಮಾತನಾಡಿ, ವಿಕಾಸ ಹೊಂದುವ ಹಕ್ಕು ಕೂಡ ಮಕ್ಕಳ ಹಕ್ಕುಗಳ ಪೈಕಿ ಹೆಚ್ಚು ಪ್ರಾಮುಖ್ಯತೆ ಹೊಂದಿದ್ದು, ಮಕ್ಕಳ ಮಾನಸಿಕ ಹಾಗೂ ದೈಹಿಕ ಸಧೃಡತೆಯೂ ಸರ್ಕಾರದ ಜವಬ್ದಾರಿಯಾಗಿದೆ. ಇದರನ್ವಯ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯ ಮೂಲಕ ವಿವಿಧ ಕಾರ್ಯಕ್ರಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ಆರೋಗ್ಯ ಸಹಾಯಕಿ ರೋಹಿಣಿ ಜಂತುಹುಳ ನಿವಾರಣಾ ಅಭಿಯಾನ ಹಾಗೂ ದಡಾರ ರೆಬುಲಾ ಲಸಿಕೆ ಕುರಿತಾಗಿ ವಿವಿರವಾದ ಮಾಹಿತಿ ನೀಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಸಭಾಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ. ಸದಸ್ಯರಾದ ಲಖಿತಾ ಆರ್ ಶೆಟ್ಟಿ, ಆಯಿಷಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ಉಷಾ, ಸದಸ್ಯರಾದ ಅಬ್ದುಲ್ ರಹಿಮಾನ್, ವಾಸು, ಅಬ್ದುಲ್ ಕರೀಂ, ಅಶ್ರಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಅಬೂಬಕ್ಕರ್ ಅಶ್ರಫ್ ಸ್ವಾಗತಿಸಿದರು. ಶಿಕ್ಷಕಿ ವಾರಿಜಾಕ್ಷಿ ವಂದಿಸಿದರು. ಶಿಕ್ಷಕಿ ಸಂಗೀತ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts