ಬಂಟ್ವಾಳ ಪುರಸಭೆಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ

ಬಂಟ್ವಾಳ ಪುರಸಭಾ 2016-17ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಒಟ್ಟು 60 ಮಂದಿ ಫಲಾನುಭವಿಗಳು ಆಯ್ಕೆಯಾಗಿದ್ದು, ತಲಾ 2.7 ಲಕ್ಷ ಮಂಜೂರಾತಿಯಾಗಿರುತ್ತದೆ. ಶನಿವಾರ ಅವರಿಗೆ ಸಾಂಕೇತಿಕವಾಗಿ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮ  ನಡೆಯಿತು.

ಈ ಸಂದರ್ಭ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಪುರಸಭಾ ವ್ಯಾಪ್ತಿಯಲ್ಲಿ ಹಲವು ರಸ್ತೆಗಳಲ್ಲೀಗ ಕಾಂಕ್ರೀಟ್ ಹಾಗೂ ಡಾಂಬರೀಕರಣ ಕಾರ್ಯ ನಡೆಯುತ್ತಿದೆ. ಸಮಗ್ರ ಕುಡಿಯುವ ನೀರಿನ ಯೋಜನೆ ಪ್ರಗತಿಯಲ್ಲಿದೆ ಎಂದರು.

ಜಾಹೀರಾತು

ನಗರೋತ್ಥಾನ ಯೋಜನೆಯಡಿ 9 ಕೋಟಿ ರೂಪಾಯಿಗಳು ಮಂಜೂರಾಗಿದ್ದು, ಎರಡು ತಿಂಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಬಳಸಾಗುವುದು ಎಂದು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಈ ಸಂದರ್ಭ ಹೇಳಿದರು. ಸಮಗ್ರ ನೀರಿನ ಯೋಜನೆಯಡಿ ಪೈಪ್ ಕಾಮಗಾರಿ ಸಂದರ್ಭ ಹಾಳಾಗಿರುವ ರಸ್ತೆಗಳನ್ನು ರಿಪೇರಿ ಮಾಡಲಾಗುವುದು. ಎರಡು ತಿಂಗಳೊಳಗೆ ಈ ಕೆಲಸ ಮುಗಿಸಲಾಗುವುದು ಎಂದು ಆಳ್ವ ತಿಳಿಸಿದರು. ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಪಿಯುಸ್ ಎಲ್. ರೋಡ್ರಿಗಸ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಆಶ್ರಯ ಸಮಿತಿ ಸದಸ್ಯ ಖಾಸಿಂ ಹಾಗೂ ಪುರಸಭಾ ಸದಸ್ಯರು ಉಪಸ್ಥಿತರಿದ್ದರು. ಮುಖ್ಯಾಧಿಕಾರಿ ಕೆ.ಸುಧಾಕರ್ ಸ್ವಾಗತಿಸಿದರು. ಆಶ್ರಯ ಸಮಿತಿ ಸದಸ್ಯ ಸಂಜೀವ ಬಂಜನ್ ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಪುರಸಭೆಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*