ಬಂಟ್ವಾಳ

ಬೋರ್ ವೆಲ್ ತೋಡಲು ಇನ್ನಿಲ್ಲ ನಿರ್ಬಂಧ

 

ಕೊಳವೆಬಾವಿ ತೋಡಲು ಇದ್ದ ನಿರ್ಬಂಧವನ್ನು ರದ್ದುಗೊಳಿಸಲಾಗಿದೆ ಎಂದು ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಎರಡು ತಾಲೂಕುಗಳಾದ ಮಂಗಳೂರು ಮತ್ತು ಬಂಟ್ವಾಳ ಬರಪೀಡಿತ ಎಂದು ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು ಪರಿಹಾರೋಪಾಯಗಳ ಕುರಿತು ಚರ್ಚೆ ನಡೆಸಲಾಗುವುದು. ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲುವ ಕುರಿತು ಯೋಜನೆ ರೂಪಿಸಲಾಗಿದೆ. ಕುಡಿಯುವ ನೀರಿನ ಬೃಹತ್ ಯೋಜನೆಗಳಾದ ತಾಲೂಕಿನ ಕರೋಪಾಡಿಯಲ್ಲಿ 26 ಕೋಟಿ ರೂ,, ಸಂಗಬೆಟ್ಟುವಿನ 36 ಕೋಟಿ ರೂ ಯೋಜನೆ ಕೆಲಸ ಕಾರ್ಯ ನಡೆಯುತ್ತಿದೆ. ಮಾಣಿಯಲ್ಲಿ 18 ಕೋಟಿ ರೂ ಯೋಜನೆ ಟೆಂಡರ್ ಆಗಿದೆ. ಸರಪಾಡಿ ಮತ್ತು ನರಿಕೊಂಬುವಿನ ಯೋಜನೆಗಳು ಕ್ಯಾಬಿನೆಟ್ ಹಂತಕ್ಕೆ ಬಂದಿದೆ. ಮಂಗಳೂರು ತಾಲೂಕಿನ ಉಳಾಯಿಬೆಟ್ಟುವಿನಲ್ಲೂ ಕುಡಿಯುವ ನೀರಿಗೆ ಯೋಜನೆ ಮಂಜೂರಾತಿ ಹಂತದಲ್ಲಿದೆ. ಹಾಗಾದರೆ ಇಡೀ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿನ ಸಮಸ್ಯೆ ಬರುವುದಿಲ್ಲ ಹಾಗೂ ಎಲ್ಲರಿಗೂ ನಲ್ಲಿ ನೀರಿನ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ರೈ ಹೇಳಿದರು. ಕಡೇಶಿವಾಲಯದಿಂದ ಅಜಿಲಮೊಗರುವಿಗೆ ಸೌಹಾರ್ದ ಸೇತುವೆ ನಿರ್ಮಾಣಕ್ಕೆ 31 ಕೋಟಿ ರೂ ಮಂಜೂರಾಗಿದೆ ಎಂದರು ರಮಾನಾಥ ರೈ.

ಬಿ.ಸಿ.ರೋಡ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಮಂಗಳೂರಿನಿಂದ ಬರುವ ಬಸ್ಸುಗಳು ನಿಲ್ಲುವ ಸಂದರ್ಭ ಉದ್ಭವಿಸಬಹುದಾದ ಸಮಸ್ಯೆಗಳ ನಿವಾರಣೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು. ಬಸ್ ನಿಲ್ದಾಣಕ್ಕೆ ಇನ್ನೂ ಹೆಚ್ಚುವರಿಯಾಗಿ ಒಂದೂವರೆ ಕೋಟಿ ರೂ ಅನುದಾನ ನೀಡುವುದಾಗಿ ರೈ ಹೇಳಿದರು. ಬಂಟ್ವಾಳದ ಮೆಸ್ಕಾಂ ವಿಭಾಗೀಯ ಕಚೇರಿ ಹಾಗೂ ಮಿನಿ ವಿಧಾನಸೌಧ ಸಹಿತ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಹಾಗೂ ಐಬಿ ನಿರ್ಮಾಣ ಅಂತಿಮ ಹಂತದಲ್ಲಿದೆ ಎಂದು ಹೇಳಿದ ರೈ, ಪಂಜೆ ಮಂಗೇಶರಾಯರ ಸ್ಮಾರಕ ಭವನ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡುವುದಾಗಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ