ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ಕಾರು ಡಿಕ್ಕಿ ಹೊಡೆದು ಹೊಂಡಾ ಆಕ್ಟಿವಾ ಸವಾರ ಮಂಗಳೂರು ನಿವಾಸಿ ರಾಜು ದೇವಾಡಿಗ (53) ಮೃತಪಟ್ಟಿದ್ದಾರೆ.
ಅವರು ಪೆರ್ನೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸಂದರ್ಭ ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುವ ಕಾರು ಡಿಕ್ಕಿ ಹೊಡೆಯಿತು. ಪರಿಣಾಮ, ತೀವ್ರ ಸ್ವರೂಪದಲ್ಲಿ ಗಾಯಗೊಂಡ ರಾಜು ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ರಾತ್ರಿ ವೇಳೆ ಮೃತಪಟ್ಟರು ಎಂದು ವಿಟ್ಲ ಪೊಲೀಸರು ತಿಳಿಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.