ವಿಟ್ಲ

ವಿಠಲ ಪ್ರೌಢಶಾಲೆಯಲ್ಲಿ ದತ್ತಿ ಉಪನ್ಯಾಸ

ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿಟ್ಲದ ವಿಠಲ ಪ್ರೌಢಶಾಲೆಯಲ್ಲಿ ಕೂಡೂರು ಕೃಷ್ಣ ಭಟ್ ದತ್ತಿ ಕಾರ್ಯಕ್ರಮದ ಪ್ರಯುಕ್ತ ಸಾಮಾಜಿಕ ಪ್ರಗತಿಯಲ್ಲಿ ಸಾಹಿತ್ಯ ವಿಷಯದಲ್ಲಿ ಉಪನ್ಯಾಸ ಕಾರ್ಯಕ್ರಮ ಮಂಗಳವಾರ ನಡೆಯಿತು.

ತುಂಬೆ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಹಿಮಾನ್ ಡಿ.ಬಿ ಉಪನ್ಯಾಸ ನೀಡಿ, ಅರ್ಥವನ್ನು ಕಟ್ಟಿಕೊಡುವುದೇ ಸಾಹಿತ್ಯದ ಕೆಲಸವಾಗಿದೆ. ಅದನ್ನು ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು.

ಜಾಹೀರಾತು

ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಕೆ ಮೋಹನ್ ರಾವ್ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ ಕನ್ನಡಪರ ನಿರಂತರವಾಗಿ ಕನ್ನಡ ಪರ ಕೆಲಸಗಳನ್ನು ಮಾಡುತ್ತಿದೆ. ಕನ್ನಡ ಭಾಷೆಯನ್ನು ಉಳಿಸುವ ಕೆಲಸ ಮಾಡುತ್ತಿದೆ. ಮಕ್ಕಳಲ್ಲಿ ಕನ್ನಡ ಭಾಷೆ, ಕವನ, ಕಥೆಗಳ ಬಗ್ಗೆ ಅರಿವು ಮೂಡಿಸುತ್ತಿದೆ ಎಂದರು.

ಕನ್ನಡ ಭವನದ ಸಂಚಾಲಕ ಗಂಗಾಧರ ಭಟ್, ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ, ಮಕ್ಕಳ ಲೋಕದ ಭಾಸ್ಕರ ಅಡ್ವಾಳ, ಪ್ರೌಢ ಶಾಲೆಯ ಕನ್ನಡ ಶಿಕ್ಷಕಿ ಗೀತಾ ಮೊದಲಾದವರು ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕ ಸಿ.ಎಚ್ ಸುಬ್ರಹ್ಮಣ್ಯ ಭಟ್ ಪ್ರಸ್ತಾವನೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಯಾನಂದ ಪೆರಾಜೆ ಸ್ವಾಗತಿಸಿದರು. ರಾಜರಾಮ ವರ್ಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts