ಜಿಲ್ಲಾ ಸುದ್ದಿ

ಲೋಕಾಯುಕ್ತ ಅಧಿಕಾರಿಗಳ ಪ್ರವಾಸ

ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಫೆ. 21, 23,  ಹಾಗೂ 28 ರಂದು ಜಿಲ್ಲೆಯ ವಿವಿದೆಡೆ ತೆರಳಿ, ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಅಹವಾಲು/ದೂರುಗಳನ್ನು ಸ್ವೀಕರಿಸುವರು.
 ಈ ಸಂದರ್ಭದಲ್ಲಿ  ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗು  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರದಲ್ಲಿ ನೀಡಬಹುದಾಗಿದೆ ಹಾಗೂ ಸ್ಥಳದಲ್ಲೇ ಇತ್ಯರ್ಥಪಡಿಸಬಹುದಾದ ದೂರುಗಳನ್ನು ಅಲ್ಲಿಯೇ ಇತ್ಯರ್ಥಪಡಿಸಲಾಗುವುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.
  ಫೆ. 21 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಛೇರಿ, ಮಧ್ಯಾಹ್ನ 3 ರಿಂದ ಸಂಜೆ 4-30 ಗಂಟೆಯವರೆಗೆ ಸರ್ಕಾರಿ ಅತಿಥಿ ಗೃಹ(ಐ.ಬಿ.), ಬಂಟ್ವಾಳ. ಫೆ. 23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ವಿಶೇಷ ತಹಶೀಲ್ದಾರರ ಕಛೇರಿ, ಮೂಡಬಿದ್ರೆ, ಫೆ. 28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಛೇರಿ, ಸುಳ್ಯ.  ಮಧ್ಯಾಹ್ನ 3 ರಿಂದ ಸಂಜೆ 4-30 ಗಂಟೆಯ ವರೆಗೆ ಪುತ್ತೂರು ತಾಲೂಕು ಕಛೇರಿ,
ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ.
     ಅನಾಮಧೇಯ ಅರ್ಜಿಗಳು ಬಂದಲ್ಲಿ  ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

9 hours ago