ಶಿವಾಜಿ ಮಹಾರಾಜರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಕರೆ ನೀಡಿದರು.
ಬಿ.ಸಿ.ರೋಡಿನ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭಾನುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾಹೀರಾತು
ಮೌಲ್ಯವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರನ್ನು ಅನುಸರಿಸುತ್ತ ನಮ್ಮ ಜೀವನ ಶೈಲಿಯನ್ನು ಬದಲಾಯಿಸಬೇಕು ಎಂದು ಅವರು ಹೇಳಿದರು.
ತಾಲೂಕು ಪಂಚಾಯತಿ ಕಾರ್ಯನಿರ್ವಹನಾಧಿಕಾರಿ ಸಿಪ್ರಿಯಾನ್ ಮಿರಾಂದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್, ಪತ್ರಕರ್ತ ಹರೀಶ ಮಾಂಬಾಡಿ ಶಿವಾಜಿ ಕುರಿತು ಮಾತನಾಡಿದರು. ಉಪತಹಶೀಲ್ದಾರ್ ಭಾಸ್ಕರ ರಾವ್ , ರಾಷ್ಟ್ರೀಯ ಹಬ್ಬಗಳ ವಿಷಯ ನಿರ್ವಾಹಕ ವಿಶುಕುಮರ್, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು. ತಾಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ಗೋಪಾಲ್ ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ"
Be the first to comment on "ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ"