ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಾಲೆತ್ತೂರಿನ ಉಮರಬ್ಬ (65) ನೇತ್ರಾವತಿ ನದಿಯಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ.
ಫೆ.17 ರಂದು ನಾಪತ್ತೆಯಾಗಿದ್ದ ಕುರಿತು ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಭಾನುವಾರ ಮಧ್ಯಾಹ್ನ ಬಿ.ಸಿ.ರೋಡ್ ಸಮೀಪ ಪಾಣೆಮಂಗಳೂರು ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಅವರ ಶವ ದೊರಕಿತು. ಲುಂಗಿ, ಬಟ್ಟೆ ಆಧಾರದಲ್ಲಿ ಶವ ಅವರದ್ದು ಎಂದು ಖಚಿತಪಡಿಸಿಕೊಳ್ಳಲಾಯಿತು. ಬಂಟ್ವಾಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಶನಿವಾರವಷ್ಟೇ ನೇತ್ರಾವತಿ ನದಿ ಪಕ್ಕದಲ್ಲಿ ನಾಪತ್ತೆಯಾದ ವ್ಯಕ್ತಿಯೋರ್ವರ ಶವ ಪತ್ತೆಯಾಗಿತ್ತು.