ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಜೊತೆಗೆ ಮೂಲಭೂತ ಸೌಕರ್ಯ ಸಹಿತ ಶಿಕ್ಷಕ ವರ್ಗಕ್ಕೆ ಪಠ್ಯ ಚಟುವಟಿಕೆಯಲ್ಲಿ ನೆಮ್ಮದಿಯ ವಾತಾವರಣವೂ ಸೃಷ್ಟಿಯಾಗುತ್ತದೆ ಎಂದು ನಿವೃತ್ತ ಮುಖ್ಯಶಿಕ್ಷಕ ವಿನಯ ಕುಮಾರ್ ಹೇಳಿದ್ದಾರೆ.
ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಲ್ಲಿನ ಶಾಲೆ ಮತ್ತು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.
ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು ಮತ್ತು ಗ್ರಾಮ ಪಂಚಾಯಿತಿ ಸದಸ್ಯ ಎಸ್.ಪಿ.ಶ್ರೀಧರ ಮಾತನಾಡಿ, ನಿವೃತ್ತ ಮುಖ್ಯಶಿಕ್ಷಕರು ಕ್ರಿಯಾಶೀಲ ಮತ್ತು ಪ್ರಗತಿಪರ ಚಿಂತನೆಯಿಂದ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು.ಗ್ರಾಮ ಪಂಚಾಯಿತಿ ಸದಸ್ಯೆ ಸುಲೋಚನಾ, ದಾನಿ ರಾಮಮೋಹನ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿಗಾರ್, ಪ್ರಮುಖರಾದ ಸುರೇಶ ಸಾಲ್ಯಾನ್, ದಾಮೋದರ ಪೂಜಾರಿ, ಕಿಟ್ಟು ಪೂಜಾರಿ ಮತ್ತಿತರರು ಇದ್ದರು.ಮುಖ್ಯಶಿಕ್ಷಕಿ ವಿನಿತಾ ಸ್ವಾಗತಿಸಿ, ಸಹಶಿಕ್ಷಕಿ ಜಯಶ್ರೀ ದೇವರಾಜ್ ವಂದಿಸಿದರು.