ವಾಮದಪದವು

ಮಂಚಕಲ್ಲು: ನಿವೃತ್ತ ಮುಖ್ಯಶಿಕ್ಷಕರಿಗೆ ಸನ್ಮಾನ

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಜೊತೆಗೆ ಮೂಲಭೂತ ಸೌಕರ್ಯ ಸಹಿತ ಶಿಕ್ಷಕ ವರ್ಗಕ್ಕೆ ಪಠ್ಯ ಚಟುವಟಿಕೆಯಲ್ಲಿ ನೆಮ್ಮದಿಯ ವಾತಾವರಣವೂ ಸೃಷ್ಟಿಯಾಗುತ್ತದೆ ಎಂದು ನಿವೃತ್ತ ಮುಖ್ಯಶಿಕ್ಷಕ ವಿನಯ ಕುಮಾರ್ ಹೇಳಿದ್ದಾರೆ.

ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಲ್ಲಿನ ಶಾಲೆ ಮತ್ತು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಶನಿವಾರ ಏರ್ಪಡಿಸಿದ್ದ  ಸನ್ಮಾನ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ಜಾಹೀರಾತು

ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು ಮತ್ತು ಗ್ರಾಮ ಪಂಚಾಯಿತಿ ಸದಸ್ಯ ಎಸ್.ಪಿ.ಶ್ರೀಧರ ಮಾತನಾಡಿ, ನಿವೃತ್ತ ಮುಖ್ಯಶಿಕ್ಷಕರು ಕ್ರಿಯಾಶೀಲ ಮತ್ತು ಪ್ರಗತಿಪರ ಚಿಂತನೆಯಿಂದ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು.ಗ್ರಾಮ ಪಂಚಾಯಿತಿ ಸದಸ್ಯೆ ಸುಲೋಚನಾ, ದಾನಿ ರಾಮಮೋಹನ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿಗಾರ್, ಪ್ರಮುಖರಾದ ಸುರೇಶ ಸಾಲ್ಯಾನ್, ದಾಮೋದರ ಪೂಜಾರಿ, ಕಿಟ್ಟು ಪೂಜಾರಿ ಮತ್ತಿತರರು ಇದ್ದರು.ಮುಖ್ಯಶಿಕ್ಷಕಿ ವಿನಿತಾ ಸ್ವಾಗತಿಸಿ, ಸಹಶಿಕ್ಷಕಿ ಜಯಶ್ರೀ ದೇವರಾಜ್ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ