ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬ್ಯೆದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ ಪುನರುತ್ಥಾನಕ್ಕೆ ಶಿಲಾನ್ಯಾಸ

ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ ಲ್‌ನಲ್ಲಿ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನದ ಪುನರುತ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಸುಮಾರು 25 ಸಾವಿರಕ್ಕೂ ಅಧಿಕ ಭಕ್ತರ ಸಮ್ಮುಖ ನಡೆಯಿತು.

https://bantwalnews.com  report

ಜಾಹೀರಾತು

ಕುಂದಾಪುರ, ಉಡುಪಿ, ಕಾರ್ಕಳ, ಮೂಡಬಿದ್ರೆ ಇನ್ನಿತರ ಕಡೆಗಳಿಂದ ತಂಡೋಪ ತಂಡವಾಗಿ ಜನಸಾಗರ ಹರಿದುಬಂತು.

ಧರ್ಮ ದೈವ ಧೂಮಾವತಿ ದೈವಸ್ಥಾನ, ಕುಪ್ಪೆ ಪಂಜುರ್ಲಿ ದೈವಸ್ಥಾನ, ಬೆರ್ಮೆರ್ ಗುಂಡ, ಗುರು ಸಾಯನ ಬೈದ್ಯರು-ಮಾತೆ ದೇಯಿ ಬ್ಯೆದ್ಯೆತಿ ಧರ್ಮ ಚಾವಡಿ, ಕೋಟಿ-ಚೆನ್ನಯ ಮೂಲಸ್ಥಾನ ಗರಡಿ, ಮಾತೆ ದೇಯಿ ಬ್ಯೆದ್ಯೆತಿ ಮಹಾ ಸಮಾಧಿ, ಚಾರಿತ್ರಿಕ ಸರೋಳಿ ಸೈಮಂಜ ಕಟ್ಟೆ ಮೊದಲಾದ ಶ್ರದ್ಧಾ ಬಿಂದುಗಳ ಪುನರುತ್ಥಾನಕ್ಕೆ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಲೋಕೇಶ್ ಶಾಂತಿ ಪೌರೋಹಿತ್ಯದಲ್ಲಿ ವಹಿಸಿದ್ದರೆ, ಕೇರಳ ಸಿವಗಿರಿ ವರ್ಕಳದ ಮಠಾಧೀಶ ಶ್ರೀ ವಿಶುದ್ದಾನಂದ ಸ್ವಾಮೀಜಿ ಹಾಗೂ ಧರ್ಮಸ್ಥಳ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸಾನಿಧ್ಯ ವಹಿಸಿದ್ದರು.

ಜಾಹೀರಾತು

ಈ ಸಂದರ್ಭ ರಾಜ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಸಭಾ ಸದಸ್ಯ ಬಿಕೆ ಹರಿಪ್ರಸಾದ್ ಕ್ಷೇತ್ರದ ವೆಬ್‌ಸೈಟ್ ಅನಾವರಣಗೊಳಿಸಿದರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಶಾಸಕಿ ಶಕುಂತಳಾ ಟಿ. ಶೆಟ್ಟಿ ಶ್ರೀ ಕ್ಷೇತ್ರದ ವಿಜ್ಞಾಪನಾ ಪತ್ರ ಬಿಡುಗಡೆ ಮಾಡಿದರು.

ಜಾಹೀರಾತು

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ ಗೆಜ್ಜೆಗಿರಿ ನಂದನ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದರು. ಶಾಸಕ, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ವಸಂತ ಬಂಗೇರ ನಿಧಿ ಸಮರ್ಪಣಾ ಪತ್ರ ಬಿಡುಗಡೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಮಾರಂಭ ಉದ್ಘಾಟಿಸಿ ಮಾತನಾಡಿ ದೇಯಿ ಬ್ಯೆದ್ಯೆತಿ ಔಷಧಿ ವನಕ್ಕೆ ಎರಡನೇ ಹಂತದ ಅಭಿವೃದ್ಧಿ ಕಾರ್ಯ ನಡೆಸಲು ತೀರ್ಮಾನಿಸಿದ್ದು, ಸುಸಜ್ಜಿತ ಔಷಧಿ ವನವಾಗಿ ಲೋಕಾರ್ಪಣೆಗೊಳ್ಳಲಿದೆ ಎಂದರು.

ಜಾಹೀರಾತು

ಅಧ್ಯಕ್ಷತೆಯನ್ನು ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷ, ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಚಿತ್ತರಂಜನ್ ಕಂಕನಾಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವಿನಯಕುಮಾರ್ ಸೊರಕೆ, ಸುನಿಲ್ ಕುಮಾರ್, ಕೋಟಿ ಶ್ರೀನಿವಾಸ ಪೂಜಾರಿ, ಮಧು ಬಂಗಾರಪ್ಪ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ ಅಧ್ಯಕ್ಷೆ ಭವಾನಿ ಚಿದಾನಂದ, ಗ್ರಾಪಂ ಸದಸ್ಯರಾದ ಕೇಶವ ಗೌಡ, ಪಡುಮಲೆ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ  ಸಂಜೀವ ರೈ ಕೆ.ಪಿ., ಗೌರವ ಅತಿಥಿಗಳಾಗಿ ಮುಂಬೈ ಬಿಲ್ಲವ ಜಾಗೃತಿ ಬಳಗದ ಸ್ಥಾಪಕಾಧ್ಯಕ್ಷ ಸುರೇಶ್ ಎಸ್.ಪೂಜಾರಿ, ಅಧ್ಯಕ್ಷ ಎನ್.ಟಿ.ಪೂಜಾರಿ, ಮುಂಬೈ ಬಿಲ್ಲವ ಎಸೋಸಿಯೇಶ್ ಅಧ್ಯಕ್ಷ ಡಿ.ನಿತ್ಯಾನಂತ ಕೋಟ್ಯಾನ್, ಉದ್ಯಮಿಗಳಾದ ಹರೀಶ್ ಅಮೀನ್, ಶೇಖರ್ ಎನ್.ಬಂಗೇರ, ಜಿತೇಂದ್ರ ಸುವರ್ಣ, ಬಜಪೆ ಸ್ವಯಂಭೂಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಎಲ್.ವಿ.ಅಮೀನ್, ರಾಜ್ಯ ಮಹಿಳಾ ಕಲ್ಯಾಣ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ದುಬೈ ಆಂಡ್ ನಾರ್ದನ್ ಎಮಿರೇಟ್ಸ್ ಬಿಲ್ಲವಾಸ್ ಅಧ್ಯಕ್ಷ ಸತೀಶ್ ಪೂಜಾರಿ, ಒಮಾನ್ ಬಿಲ್ಲವಾಸ್ ಮಸ್ಕತ್ ಅಧ್ಯಕ್ಷ ಎಸ್.ಕೆ.ಪೂಜಾರಿ, ಬಹರೈನ್ ಶ್ರೀ ಗುರು ಸೇವಾ ಸಮಿತಿಯ ರಾಜ್‌ಕುಮಾರ್, ಕುವೈಟ್ ಬಿಲ್ಲವ ಸಂಘದ ಅಧ್ಯಕ್ಷ ರಘು ಸಿ.ಪೂಜಾರಿ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಅಶೋಕ್ ಸುವರ್ಣ, ಉದ್ಯಮಿ ರವೀಂದ್ರ ಪೂಜಾರಿ, ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ, ಗೋವಾ ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಚಂದ್ರಹಾಸ ಅಮೀನ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಉಮಾನಾಥ್ ಕೋಟ್ಯಾನ್, ಡಾ.ಸುಬ್ಬು ಪೂಜಾರಿ,  ಮುಂಬೈ ಯುವ ಬಿಲ್ಲವ ಕ್ಷೇಮಾಭ್ಯುದಯ ಯುವ ಬಿಲ್ಲವ ಸಮಿತಿ ನೀಲೇಶ್ ಪೂಜಾರಿ, ಮಂಗಳೂರು ನಮ್ಮ ಕುಡ್ಲವಾಹಿನಿಯ ಆಡಳಿತ ನಿರ್ದೇಶಕ ಲೀಲಾಕ್ಷ ಕರ್ಕೇರ, , ಕುಡ್ಲ ಬಿರುವೆರ್ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ, ವಿಶೇಷ ಅತಿಥಿಗಳಾಗಿ ಕಿನ್ನಿಮಾಣಿ-ಪೂಮಾಣಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿರಾಜ್ ಶೆಟ್ಟಿ ಅಣಿಲೆ. ಪರ್ಪುಂಜ ರಾಮಜಾಲ್ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಆಡಳಿತ ಮೊಕ್ತೇಸರ ಸಂಜೀವ ಪೂಜಾರಿ ಕೂರೇಲು,  ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆ ಸಂಚಾಲಕ ವೇಣುಗೋಪಾಲ್ ಭಟ್, ರಾಜ್ಯ ವಕೀಲರ ಪರಿಷತ್ ಉಪಾಧ್ಯಕ್ಷ ಸುಭಾಷ್ ಕೌಡಿಚ್ಚಾರ್, ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ದಯಾ ವಿಷ್ಣುಪ್ರಸಾದ್ ರೈ, ತಾಪಂ ಸದಸ್ಯ ರಾಧಾಕೃಷ್ಣ ಬೋರ್ಕರ್, ಗ್ರಾಪಂ ಸದಸ್ಯರಾದ ಗುರುಪ್ರಸಾದ್ ರೈ, ರವಿರಾಜ ರೈ ಸಜಂಕಾಡಿ, ಸುಶೀಲಾ ಗೌಡ, ಉದಯ ಕುಮಾರ್ ಉಪಸ್ಥಿತರಿದ್ದರು.

ರಾಜ್ಯಪ್ರಶಸ್ತಿ ಪುರಷ್ಕೃತ ಚಿತ್ರನಟ, ನಿರ್ಮಾಪಕ, ನಿರ್ದೇಶಕ ಡಾ.ರಾಜಶೇಖರ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ರವೀಂದ್ರ ಸುವರ್ಣ ದಂಪತಿಯಿಂದ ಶ್ರೀಗಳಿಗೆ ಪಾದಪೂಜೆ ನೆರವೇರಿತು. ಸಮಾರಂಭದಲ್ಲಿ ಅನುವಂಶೀಯ ಮೊಕ್ತೇಸರ ಲೀಲಾವತಿ ಪೂಜಾರಿ, ಕ್ಷೇತ್ರದ ಯಜಮಾನ ಶ್ರೀಧರ ಪೂಜಾರಿ, ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿ ಸಮಿತಿ ಕಾರ್ಯಾಧ್ಯಕ್ಷರಾದ ಪೀತಾಂಬರ ಹೇರಾಜೆ, ಜಯಂತ ನಡುಬೈಲ್, ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ, ಕಾರ್ಯದರ್ಶಿಗಳಾದ ಸುಧಾಕರ ಸುವರ್ಣ, ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಚಿತ್ರ ಸುವರ್ಣ, ಸುಗಂಧಿನಿ ಪ್ರಾರ್ಥನೆ ಹಾಡಿದರು. ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷ, ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಚಿತ್ತರಂಜನ್ ಕಂಕನಾಡಿ ಸ್ವಾಗತಿಸಿದರು. ಶಶಿಧರ ಕಿನ್ನಿಮಜಲು, ನರೇಶ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು.

ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಭಾನುವಾರ ಬೆಳಗ್ಗೆ ಪುತ್ತೂರಿನಲ್ಲಿ ನಂದನ ಬಿತ್ತ್‌ಲ್ ಕ್ಷೇತ್ರಕ್ಕೆ ಬೃಹತ್ ವಾಹನ ಜಾಥಾವನ್ನು ದರ್ಬೆ ಬೈಪಾಸ್ ವೃತ್ತದ ಬಳಿ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಕಂಕನಾಡಿ ಉದ್ಘಾಟಿಸಿದರು. ಕಾರ್ಕಳ, ಮೂಡುಬಿದ್ರೆಯಿಂದ, ಮಂಗಳೂರಿನ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಿಂದ, ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಿಂದ ವಾಹನ ಜಾಥಾ ಹೊರಟು ಪುತ್ತೂರು  ದರ್ಬೆ ಬೈಪಾಸ್ ವೃತ್ತದ ಬಳಿ ನಿರ್ಮಾಣಗೊಂಡ ಕೋಟಿ-ಚೆನ್ನಯ ದ್ವಾರದ ಬಳಿ ತಲುಪಿ ಅಲ್ಲಿ ಚಾಲನೆ ನೀಡಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬ್ಯೆದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ ಪುನರುತ್ಥಾನಕ್ಕೆ ಶಿಲಾನ್ಯಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*