ಅಣಬೆ ಬೇಸಾಯ ಪ್ರಾತ್ಯಕ್ಷಿಕೆ

ತೋಟಗಾರಿಕೆ ಇಲಾಖೆ , ಜಿಲ್ಲಾ ಪಂ. ಬಂಟ್ವಾಳ. ಮಹಿಳಾ ಮತ್ತು ಅಭಿವೃದ್ದಿ ಇಲಾಖೆ ಬಂಟ್ವಾಳ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಂಟ್ವಾಳ ಇವರ ಆಶ್ರಯದಲ್ಲಿ 2016-17 ನೇ ಸಾಲಿನ ತಾಲೂಕು ಪಂ.ಯೋಜನೆಯಡಿ ರೈತ ಮಹಿಳೆಯರಿಗೆ ಅಣಬೆ ಬೇಸಾಯ ಪ್ರಾತ್ಯಕ್ಷತೆ ಹಾಗೂ ತರಬೇತಿ ಕಾರ್‍ಯಕ್ರಮ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು .

ಕಾರ್‍ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ  ಮಹಿಳೆಯರಿಗೆ ಅರ್ಥಿಕ ಶಕ್ತಿ ತುಂಬಿದಾಗ ಸಬಲೀಕರಣ ಸಾಧ್ಯ ಎನ್ನುವ ನಿಟ್ಟಿನಲ್ಲಿ ಸರಕಾರ ಇಂತಹ ಯೋಜನೆಗಳನ್ನು ಅನುಷ್ಟಾನಗೊಳಿಸಿದೆ ಎಂದರು.

ಜಾಹೀರಾತು

ಕೃಷಿಯ ಕುರಿತು ಅಥವಾ ಇನ್ನಿತರ ಸರಕಾರದ ಯೋಜನೆಗಳ ಬಗ್ಗೆ ಮಹಿಳಯರು ಮಾಹಿತಿಯನ್ನು  ಪಡೆದುಕೊಂಡು ಸ್ವಾವಲಂಬಿ ಉದ್ಯೋಗ  ಮಾಡಿದಾಗ ಉತ್ತಮ ಯಶಸ್ಸು ಪಡೆಯಲು ಸಾಧ್ಯ ಎಂದು ಅವರು ಹೇಳಿದರು.

ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ ಬಿ.ಎಂ.ವಹಿಸಿದ್ದರು.

ವೇದಿಕೆಯಲ್ಲಿ ಬಂಟ್ವಾಳ ಸಹಾಯಕ ತೋಟಗಾರಿಕಾ ನಿರ್ದೇಶಕ ದಿನೇಶ್, ತಾ.ಪಂ.ಕಾರ್‍ಯನಿರ್ವಹಣಾಧಿಕಾರಿ ಸಿಪ್ರಿಂಯಾನ್ ಮಿರಾಂದ, ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಕಾರ್‍ಯದರ್ಶಿ ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ತಾ.ಪಂ.ಸದಸ್ಯೆ ಮಲ್ಲಿಕಾ ಶೆಟ್ಟಿ, ಬಂಟ್ವಾಳ ಸ್ರ್ತಿ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಶರತ್ ಶೆಟ್ಟಿ ಮತ್ತು ಸಂಪನ್ಮೂಲ ವ್ಯಕ್ತಿ ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಪಾಂಡುರಂಗ ಕೆ ಉಪಸ್ಥಿತರಿದ್ದರು. ಸಹಾಯಕ ತೋಟಗಾರಿಕಾ ಇಲಾಖೆಯ ಅಧಿಕಾರಿ ಬಾಲಕೃಷ್ಣ ಸ್ವಾಗತಿಸಿ, ಮೇಲ್ವಿಚಾರಕಿ  ಸಿಂದೂ ಕೆ.ವಿ ವಂದಿಸಿದರು. ಮೇಲ್ವಿಚಾರಕಿ  ಸವಿತಾನವೀನ್ ಕಾರ್‍ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಣಬೆ ಬೇಸಾಯ ಪ್ರಾತ್ಯಕ್ಷಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*