ತೋಟಗಾರಿಕೆ ಇಲಾಖೆ , ಜಿಲ್ಲಾ ಪಂ. ಬಂಟ್ವಾಳ. ಮಹಿಳಾ ಮತ್ತು ಅಭಿವೃದ್ದಿ ಇಲಾಖೆ ಬಂಟ್ವಾಳ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಂಟ್ವಾಳ ಇವರ ಆಶ್ರಯದಲ್ಲಿ 2016-17 ನೇ ಸಾಲಿನ ತಾಲೂಕು ಪಂ.ಯೋಜನೆಯಡಿ ರೈತ ಮಹಿಳೆಯರಿಗೆ ಅಣಬೆ ಬೇಸಾಯ ಪ್ರಾತ್ಯಕ್ಷತೆ ಹಾಗೂ ತರಬೇತಿ ಕಾರ್‍ಯಕ್ರಮ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು .
ಕಾರ್‍ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಹಿಳೆಯರಿಗೆ ಅರ್ಥಿಕ ಶಕ್ತಿ ತುಂಬಿದಾಗ ಸಬಲೀಕರಣ ಸಾಧ್ಯ ಎನ್ನುವ ನಿಟ್ಟಿನಲ್ಲಿ ಸರಕಾರ ಇಂತಹ ಯೋಜನೆಗಳನ್ನು ಅನುಷ್ಟಾನಗೊಳಿಸಿದೆ ಎಂದರು.
ಕೃಷಿಯ ಕುರಿತು ಅಥವಾ ಇನ್ನಿತರ ಸರಕಾರದ ಯೋಜನೆಗಳ ಬಗ್ಗೆ ಮಹಿಳಯರು ಮಾಹಿತಿಯನ್ನು ಪಡೆದುಕೊಂಡು ಸ್ವಾವಲಂಬಿ ಉದ್ಯೋಗ ಮಾಡಿದಾಗ ಉತ್ತಮ ಯಶಸ್ಸು ಪಡೆಯಲು ಸಾಧ್ಯ ಎಂದು ಅವರು ಹೇಳಿದರು.
ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ ಬಿ.ಎಂ.ವಹಿಸಿದ್ದರು.
ವೇದಿಕೆಯಲ್ಲಿ ಬಂಟ್ವಾಳ ಸಹಾಯಕ ತೋಟಗಾರಿಕಾ ನಿರ್ದೇಶಕ ದಿನೇಶ್, ತಾ.ಪಂ.ಕಾರ್‍ಯನಿರ್ವಹಣಾಧಿಕಾರಿ ಸಿಪ್ರಿಂಯಾನ್ ಮಿರಾಂದ, ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಕಾರ್‍ಯದರ್ಶಿ ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ತಾ.ಪಂ.ಸದಸ್ಯೆ ಮಲ್ಲಿಕಾ ಶೆಟ್ಟಿ, ಬಂಟ್ವಾಳ ಸ್ರ್ತಿ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಶರತ್ ಶೆಟ್ಟಿ ಮತ್ತು ಸಂಪನ್ಮೂಲ ವ್ಯಕ್ತಿ ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಪಾಂಡುರಂಗ ಕೆ ಉಪಸ್ಥಿತರಿದ್ದರು. ಸಹಾಯಕ ತೋಟಗಾರಿಕಾ ಇಲಾಖೆಯ ಅಧಿಕಾರಿ ಬಾಲಕೃಷ್ಣ ಸ್ವಾಗತಿಸಿ, ಮೇಲ್ವಿಚಾರಕಿ ಸಿಂದೂ ಕೆ.ವಿ ವಂದಿಸಿದರು. ಮೇಲ್ವಿಚಾರಕಿ ಸವಿತಾನವೀನ್ ಕಾರ್‍ಯಕ್ರಮ ನಿರೂಪಿಸಿದರು.