ಬಂಟ್ವಾಳ ತಾಲೂಕಿನ ನರಿಕೊಂಬು ಸತ್ಯದೇವತಾ ಕಲ್ಲುರ್ಟಿ ದೇವಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಶ್ರೀ ಶಾಂತೇಶ್ವರ ಬಸದಿ ಈ ದೇವಸ್ಥಾನಗಳು ಕರ್ನಾಟಕ ಹಿಂದೂ ಧಾಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದ ಪ್ರಕಾರ ಅಧಿಸೂಚಿತ ಸಂಸ್ಥೆಯಾಗಿದ್ದು, ಈ ದೇವಸ್ಥಾನಗಳನ್ನು ಅಧಿಸೂಚಿತ ಸಂಸ್ಥೆಗಳ ಪಟ್ಟಿಯಿಂದ ಹೊರತುಪಡಿಸಲು ರಾಜ್ಯ ಧಾರ್ಮಿಕ ಪರಿಷತ್ತಿಗೆ ಆಯಾ ಸಂಸ್ಥೆಗಳು ಅರ್ಜಿ ಸಲ್ಲಿಸಿವೆ.
ಈ ಬಗ್ಗೆ ಸಾರ್ವಜನಿಕರು ತಮ್ಮ ಸಲಹೆ, ಸೂಚನೆ, ಆಕ್ಷೇಪಣೆಗಳನ್ನು ಒಂದು ತಿಂಗಳ ಒಳಗಾಗಿ ಜಿಲ್ಲಾಧಿಕಾರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ದ.ಕ ಜಿಲ್ಲೆ ಇವರಿಗೆ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಧಾರ್ಮಿಕ ಸಂಸ್ಥೆಗಳನ್ನು ಅಧಿಸೂಚಿತ ಸಂಸ್ಥೆಗಳ ಪಟ್ಟಿಯಿಂದ ಕೈಬಿಡಲು ಅರ್ಜಿ: ಆಕ್ಷೇಪ ಆಹ್ವಾನ"