ಬಂಟ್ವಾಳ

ಧಾರ್ಮಿಕ ಸಂಸ್ಥೆಗಳನ್ನು ಅಧಿಸೂಚಿತ ಸಂಸ್ಥೆಗಳ ಪಟ್ಟಿಯಿಂದ ಕೈಬಿಡಲು ಅರ್ಜಿ: ಆಕ್ಷೇಪ ಆಹ್ವಾನ

ಬಂಟ್ವಾಳ ತಾಲೂಕಿನ ನರಿಕೊಂಬು ಸತ್ಯದೇವತಾ ಕಲ್ಲುರ್ಟಿ ದೇವಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ  ಶ್ರೀ ಶಾಂತೇಶ್ವರ ಬಸದಿ ಈ ದೇವಸ್ಥಾನಗಳು ಕರ್ನಾಟಕ ಹಿಂದೂ ಧಾಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದ ಪ್ರಕಾರ ಅಧಿಸೂಚಿತ ಸಂಸ್ಥೆಯಾಗಿದ್ದು, ಈ ದೇವಸ್ಥಾನಗಳನ್ನು ಅಧಿಸೂಚಿತ ಸಂಸ್ಥೆಗಳ ಪಟ್ಟಿಯಿಂದ ಹೊರತುಪಡಿಸಲು ರಾಜ್ಯ ಧಾರ್ಮಿಕ ಪರಿಷತ್ತಿಗೆ ಆಯಾ ಸಂಸ್ಥೆಗಳು ಅರ್ಜಿ ಸಲ್ಲಿಸಿವೆ.
    ಈ ಬಗ್ಗೆ  ಸಾರ್ವಜನಿಕರು ತಮ್ಮ ಸಲಹೆ, ಸೂಚನೆ, ಆಕ್ಷೇಪಣೆಗಳನ್ನು ಒಂದು ತಿಂಗಳ ಒಳಗಾಗಿ ಜಿಲ್ಲಾಧಿಕಾರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ದ.ಕ ಜಿಲ್ಲೆ ಇವರಿಗೆ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ