ಮಿಲಿಟರಿ ಕಾಲೇಜು 8ನೇ ತರಗತಿಗೆ ಸೇರ್ಪಡೆ: ಅರ್ಜಿ ಆಹ್ವಾನ

ಉತ್ತರಾಖಂಡ ರಾಜ್ಯದ ಡೆಹರಡೂನ್‍ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್, ಇಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 1 ಹಾಗೂ 02 ರಂದು ನಡೆಸಲಾಗುವುದು. 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-01-2018 ರಂತೆ 11  ವರ್ಷದಿಂದ 13 ವರ್ಷದೊಳಗಿರುವ ಬಾಲಕರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಾಗಿರುತ್ತಾರೆ.
 ವಿವರಣ ಪತ್ರ ಹಾಗೂ ಹಳೇ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಅರ್ಜಿ ನಮೂನೆಯನ್ನು ಕೋರಿಕೆ ಪತ್ರದ ಮೇರೆಗೆ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ನಂ.58 ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು-560025 ಇವರ ಹೆಸರಿನಲ್ಲಿ ರೂ.550 ಡಿಮಾಂಡ್ ಡ್ರಾಪ್ಟ್ ಸಲ್ಲಿಸಿ ಪಡೆಯಬಹುದಾಗಿದೆ.
  ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿಮಾ.31 ರೊಳಗೆ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬೆಂಗಳೂರು ವಿಳಾಸಕ್ಕೆ ಸಲ್ಲಿಸಬೇಕು.
  ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಇಲಾಖೆ, ಬೆಂಗಳೂರು ದೂ. ಸಂಖ್ಯೆ:080-25589459 ಮೂಲಕ ಕಛೇರಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಿಲಿಟರಿ ಕಾಲೇಜು 8ನೇ ತರಗತಿಗೆ ಸೇರ್ಪಡೆ: ಅರ್ಜಿ ಆಹ್ವಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*