ಉತ್ತರಾಖಂಡ ರಾಜ್ಯದ ಡೆಹರಡೂನ್‍ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್, ಇಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 1 ಹಾಗೂ 02 ರಂದು ನಡೆಸಲಾಗುವುದು. 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-01-2018 ರಂತೆ 11 ವರ್ಷದಿಂದ 13 ವರ್ಷದೊಳಗಿರುವ ಬಾಲಕರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಾಗಿರುತ್ತಾರೆ.
ವಿವರಣ ಪತ್ರ ಹಾಗೂ ಹಳೇ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಅರ್ಜಿ ನಮೂನೆಯನ್ನು ಕೋರಿಕೆ ಪತ್ರದ ಮೇರೆಗೆ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ನಂ.58 ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು-560025 ಇವರ ಹೆಸರಿನಲ್ಲಿ ರೂ.550 ಡಿಮಾಂಡ್ ಡ್ರಾಪ್ಟ್ ಸಲ್ಲಿಸಿ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿಮಾ.31 ರೊಳಗೆ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬೆಂಗಳೂರು ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಇಲಾಖೆ, ಬೆಂಗಳೂರು ದೂ. ಸಂಖ್ಯೆ:080-25589459 ಮೂಲಕ ಕಛೇರಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.