ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಸೋರ್ಣಾಡು ಎಂಬಲ್ಲಿ ಪಿಗ್ಮಿ ಸಂಗ್ರಾಹಕಿಹಾಗೂ ಕಳೆದ ಬಾರಿ ತಾಲೂಕು ಪಂಚಾಯಿತಿಗೆ ಸ್ಪರ್ಧಿಸಿದ್ದ ಮಹಿಳೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳೀಯ ನಿವಾಸಿ ವಿವಾಹಿತೆ ಶೈಲಜಾ (47) ಮೃತಪಟ್ಟವರು. ಕಳೆದ ಹಲವು ವರ್ಷಗಳಿಂದ ಪಿಗ್ಮಿ ಸಂಗ್ರಾಹಕಿಯಾಗಿ ದುಡಿಯುತ್ತಿದ್ದ ಅವರು, ಮನೆಯಲ್ಲಿ ನೇಣು ಬಿಗಿದು ಮೃತಪಟ್ಟಿದ್ದಾರೆ. ಪತಿ ವಾಹನ ಚಾಲಕರಾಗಿದ್ದರೆ, ಮಕ್ಕಳ ಪೈಕಿ ಓರ್ವ ಪುತ್ರಿ ಮಂಗಳೂರಿನ ಖಾಸಗಿ ಸಂಸ್ಥೆ ಉದ್ಯೋಗಿ. ಮತ್ತೋರ್ವ ಪುತ್ರಿ ಸೋಮವಾರ ಉದ್ಯೋಗ ಹಿನ್ನೆಲೆಯಲ್ಲಿ ಮನೆಯಿಂದ ಬೆಂಗಳೂರಿಗೆ ತೆರಳಿದ್ದರು. ಮಂಗಳವಾರ ಸಂಜೆ ಪತಿ ಮನೆಗೆ ಬಂದು ನೋಡಿದಾಗ ಶೌಚಾಲಯದಲ್ಲಿ ಶೈಲಜಾ ನೇಣಿಗೆ ಶರಣಾಗಿರುವುದು ಕಂಡುಬಂತು.
ಜಾಹೀರಾತು
ತಾಲೂಕು ಪಂಚಾಯಿತಿಯಲ್ಲಿ ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗಗೊಂಡಿದ್ದ ಅವರ ಸಾವಿನ ತನಿಖೆಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಮಾಡುತ್ತಿದ್ದಾರೆ. ಪ್ರಕರಣ ದಾಖಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪಿಗ್ಮಿ ಸಂಗ್ರಾಹಕಿ ನೇಣಿಗೆ ಶರಣು"
Be the first to comment on "ಪಿಗ್ಮಿ ಸಂಗ್ರಾಹಕಿ ನೇಣಿಗೆ ಶರಣು"