ಬಂಟ್ವಾಳ

24ರ ಪ್ರತಿಭಟನೆ, 25ರ ಬಂದ್ ಬೆಂಬಲಿಸಲು ಬಿಜೆಪಿ ಮನವಿ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರಿಗೆ ಆಗಮಿಸುವುದನ್ನು ವಿರೋಸಿ ಸಂಘ ಪರಿವಾರ ವತಿಯಿಂದ ಮಂಗಳೂರಿನಲ್ಲಿ ಫೆ.24 ರಂದು ನಡೆಯುವ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಬಂಟ್ವಾಳದಿಂದ ಸುಮಾರು ಒಂದೂವರೆ ಸಾವಿರ ಕಾರ್ಯಕರ್ತರು ತೆರಳಲಿದ್ದಾರೆ.

ಈ ವಿಷಯವನ್ನು ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ. ಭಟ್ ಪಕ್ಷ ಕಚೇರಿಯಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  25 ರಂದು ಜಿಲ್ಲೆಯಲ್ಲಿ ನಡೆಯುವ ಹರತಾಳಕ್ಕೆ ಎಲ್ಲರೂ ಬಂದ್ ಮಾಡುವ ಮೂಲಕ ಸಹಕರಿಸುವಂತೆ ಮನವಿ ಮಾಡಿದರು.

24 ರಂದು ಮಂಗಳೂರಿನಲ್ಲಿ ನಡೆಯುವ ಪ್ರತಿಭಟನಾ ಮೆರವಣಿಗೆ ಸಹಿತ ೨೫ರಂದು ಬೆಳಗ್ಗಿನಿಂದ ಸಂಜೆವರೆಗೆ ನಡೆಯುವ ಹರತಾಳದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ವಿಕಾಸ್ ಪುತ್ತೂರು ಆಗ್ರಹಿಸಿದರು.

ಜಾಹೀರಾತು

ಈ ಕುರಿತು ಎಲ್ಲ ಬಸ್ ಮಾಲೀಕರು, ಅಂಗಡಿ ಮುಂಗಟ್ಟು ಮಾಲೀಕರು ಬಂದ್ ಗೆ ಸಹಕರಿಸಬೇಕು ಎಂದು ಮನವಿ ಮಾಡಿದದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಪಕ್ಷ ನಾಯಕರಾದ ಜಿ.ಆನಂದ, ದೇವದಾಸ ಶೆಟ್ಟಿ, ರಾಮದಾಸ ಬಂಟ್ವಾಳ ಉಪಸ್ಥಿತರಿದ್ದರು.

 

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts