ಬಂಟ್ವಾಳ ಎಸ್‌ವಿಎಸ್ ಕಾಲೇಜು ಸಭಾಂಗಣದಲ್ಲಿ ಡಾ| ಅಮ್ಮೆಂಬಳ ಬಾಳಪ್ಪ ಸೇವಾ ಪ್ರತಿಷ್ಠಾನ ಮತ್ತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಡಾ| ಅಮ್ಮೆಂಬಳ ಬಾಳಪ್ಪರ 96ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆಯಿತು.
ಮಂಗಳೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಪಿ.ವಿ.ಮೋಹನ್ ಮಾತನಾಡಿ, ರಾಮ್‌ಮನೋಹರ ಲೋಹಿಯಾ ಅಭಿಮಾನಿಯಾಗಿದ್ದ ಬಾಳಪ್ಪ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿದವರು. ರಾಜಕೀಯ ಮೌಲ್ಯಕ್ಕಿಂತ ವೈಯಕ್ತಿಕ ಜೀವನ ಮೌಲ್ಯ ಮುಖ್ಯ ಎಂದು ಅನಿಪ್ರಾಯಪಟ್ಟರು.
ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ. ಮೋಹನ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸ್ವಾತಂತ್ರ್ಯ ಯೋಧ ಡಾ| ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ(ರಿ) ಬಂಟ್ವಾಳ ಇದರ ಅಧ್ಯಕ್ಷ ಹಿರಿಯ ಪತ್ರಕರ್ತ ಅಮ್ಮೆಂಬಳ ಆನಂದ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಂಟ್ವಾಳ ಎಸ್‌ವಿಎಸ್ ಕಾಲೇಜು ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಕಾರ್ಯಕ್ರಮದ ಬಗ್ಗೆ ಮಾತನಾಡಿ ಶುಭ ಹಾರೈಸಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಿ.ಎಂ. ಕುಲಾಲ್ ಮಾತನಾಡಿ, ಡಾ| ಬಾಳಪ್ಪ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿ ಬ್ರಿಟಿಷರ ವಿರುದ್ದ ಹೋರಾಡಿ ಜೈಲು ಶಿಕ್ಷೆ ಅನುಭವಿಸಿದವರು. ಕಾರ್ಮಿಕರು, ಕೃಷಿಕರ ಬಗ್ಗೆ ನ್ಯಾಯೋಚಿತ ಹೋರಾಟ ನಡೆಸಿ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸಿದವರು ಎಂದರು.
ಸಾಮಾಜಿಕ ನೇತಾರ ಎ. ಸಿ.ಭಂಡಾರಿ, ಸಮಾಜ ಸೇವಾ ಸಹಕಾರಿ ಬ್ಯಾಂಕಿನ ನಿಕಟಪೂರ್ವ ಅಧ್ಯಕ್ಷ ಕೆ. ದಯಾನಂದ ಬೆಳ್ಳೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಪ್ರೊ| ತುಕರಾಂ ಪೂಜಾರಿ, ಜಿಲ್ಲಾ ಕಸಾಪ ಗೌ.ಕಾರ್ಯದರ್ಶಿ ಬಿ. ತಮ್ಮಯ್ಯ, ಬಂಟ್ವಾಳ ಕಸಾಪ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ, ದಾಮೋದರ ಬಿ.ಎಂ., ಧರ್ಮಜಾಗರಣ ಪ್ರತಿಷ್ಠಾನ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ ಸದಸ್ಯ ಪರಮೇಶ್ವರ ಎಂ., ಬಂಟ್ವಾಳ ಸಿಪಿಐ ಕಾರ್ಯದರ್ಶಿ ಶೇಖರ ಬಿ., ಭೂನ್ಯಾಯ ಮಂಡಳಿ ಮಾಜಿ ಸದಸ್ಯ ಮುತ್ತಪ್ಪ ಪೂಜಾರಿ ಮೊದಲಾದ ಪ್ರಮುಖರು ಪಾಲ್ಗೊಂಡಿದ್ದರು. ಬಂಟ್ವಾಳ ತಾ| ಕನ್ನಡ ಭವನ ನಿರ್ಮಾಣ ಸಮಿತಿ ಸಂಚಾಲಕ ಗಂಗಾಧರ ಭಟ್ ಕೊಳಕೆ ಸ್ವಾಗತಿಸಿ, ಟ್ರಸ್ಟ್ ಕಾರ್ಯದರ್ಶಿ ಉಮೇಶ್ ಪಿ. ಕೆ. ವಂದಿಸಿದರು. ಉಪನ್ಯಾಸಕ ಚೇತನ್ ಮುಂಡಾಜೆ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಡಾ| ಅಮ್ಮೆಂಬಳ ಬಾಳಪ್ಪರ 96ನೇ ಜನ್ಮ ದಿನಾಚರಣೆ"