ಬಂಟ್ವಾಳ

ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭ ಫೆ.28ರಂದು

ಬಂಟ್ವಾಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಬಿ.ಸುಬ್ಬಯ್ಯ ಶೆಟ್ಟಿ, ಬಿ..ಮೊಯ್ದಿನ್ ಮತ್ತು ದಿನೇಶ್ ಅಮೀನ್ ಮಟ್ಟು ಅವರಿಗೆ ಅಭಿನಂದನಾ ಸಮಾರಂಭ, ಮದರ್ ತೆರೆಸಾ ಸಂತ ಪದವಿ ಪ್ರಾಪ್ತಿಯ ಸಂಭ್ರಮಾಚರಣೆ ಫೆ.28ರಂದು ಅಪರಾಹ್ನ 3 ಗಂಟೆಗೆ ನಡೆಯಲಿದೆ ಎಂದು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಆಲಿ ತಿಳಿಸಿದರು.

ಅಧ್ಯಕ್ಷತೆಯನ್ನು ಕೇಂದ್ರ ಮಾಜಿ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ವಹಿಸುವರು, ವಿಶೇಷ ಆಹ್ವಾನಿತರಾಗಿ ಬಂದರು ಸಚಿವ ಪ್ರಮೋದ್ ಮಧ್ವರಾಜ್, ಕೆಪಿಸಿಸಿ ಉಪಾಧ್ಯಕ್ಷ ಡಾ.ಬಿ.ಎಲ್.ಶಂಕರ್ ಭಾಗವಹಿಸುವರು. ಸಾಹಿತಿ, ಸಂಶೋಧಕ ಮುದ್ದು ಮೂಡುಬೆಳ್ಳೆ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಡಾ.ಸದಾನಂದ ಪೆರ್ಲ, ಮುಸ್ಲಿಂ ಲೇಖಕರ ಸಂಘ ಉಪಾಧ್ಯಕ್ಷ ಮಹಮ್ಮದ್ ಆಲಿ ಪ್ರಶಸ್ತಿ ಪುರಸ್ಕೃತರ ಅಭಿನಂದನಾ ಭಾಷಣ ಮಾಡುವರು. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಕ್ಯಾಂಪಸ್ ಡೈರೆಕ್ಟರ್ ಹಾಗೂ ಚೇರ್ಮನ್ ಡಾ. ಆಂಟೊನಿ ಪ್ರಕಾಶ್ ಮೊಂತೆರೋ ಸಂತ ಮದರ್ ತೆರೆಸಾ ಗುಣಗಾನ ಮಾಡುವರು.

ಜಾಹೀರಾತು

ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಅರಣ್ಯ ಸಚಿವ ಬಿ.ರಮಾನಾಥ ರೈ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ.ಶೆಟ್ಟಿ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ವಿಧಾನಪರಿಷತ್ತಿನ ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ, ಬೆಳ್ತಂಗಡಿ ಶಾಸಕ ಕೆ.ವಸಂತ ಬಂಗೇರ, ವಿಧಾನಪರಿಷತ್ತು ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಜೆ.ಆರ್.ಲೋಬೊ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಮೊಯ್ದೀನ್ ಬಾವ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್. ಖಾದರ್, ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ನಿರ್ದೇಶಕ ಡಾ.ರಘು, ..ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಉಪಸ್ಥಿತರಿರುವರು ಎಂದರು.

ಬಂಟ್ವಾಳ ಬ್ಲಾಕ್ ಕಾಂಗ್ರಸ್ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಬಂಟ್ವಾಳ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಬುಡಾ ಮಾಜಿ ಅಧ್ಯಕ್ಷ ಪಿಯುಸ್ ಎಲ್. ರೋಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts