ಫರಂಗಿಪೇಟೆ

ಫರಂಗಿಪೇಟೆಯಲ್ಲಿ ಸರಳ ಸಾಮೂಹಿಕ ವಿವಾಹ

ಮುಹಿಯ್ಯುದ್ದೀನ್ ಜುಮಾ ಮಸೀದಿ ಫರಂಗಿಪೇಟೆ ಸಹಕಾರದೊಂದಿಗೆ ಖಿದ್‌ಮತುಲ್ ಇಸ್ಲಾಮ್ ಅಸೋಸಿಯೇಶನ್ ಫರಂಗಿಪೇಟೆ ವತಿಯಿಂದ ಫರಂಗಿಪೇಟೆ ನೇತ್ರಾವತಿ ನದಿ ಕಿನಾರೆಯಲ್ಲಿ ಹತ್ತು ಜೋಡಿಗಳ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಭಾನುವಾರ ನಡೆಯಿತು.

ಈ ಸಂದರ್ಭ ಮಾತನಾಡಿದ ಫರಂಗಿಪೇಟೆ ಜುಮಾ ಮಸೀದಿ ಖತೀಬ್ ಉಸ್ಮಾನ್ ದಾರಿಮಿ, ಬಡವರು ಮತ್ತು ನಿರ್ಗತಿಕರಿಗೆ ನೆರವಾಗುವ ಮೂಲಕ ಅವರ ಬಾಳನ್ನು ಬೆಳಗಿಸುವ ಜವಾಬ್ದಾರಿ ಉಳ್ಳವರ ಹಾಗೂ ಸಮಾಜದಲ್ಲಿ ಜವಾಬ್ದಾರಿಯುಕ್ತ ಸ್ಥಾನದಲ್ಲಿರುವವರ ಕರ್ತವ್ಯವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಾಜ್ಯ ಆಹಾರ ಸಚಿವ ಯು.ಟಿ.ಖಾದರ್ ಮಾತನಾಡಿ, ಖಿದ್‌ಮತುಲ್ ಇಸ್ಲಾಂ ಎಸೋಸಿಯೇಷನ್  ಸಮಾಜಕ್ಕೆ ಅರ್ಥಪೂರ್ಣ ಸಂದೇಶವನ್ನು ನೀಡಿದೆ ಎಂದರು.

ಬಿ.ಅಹ್ಮದ ಹಾಜಿಯವರು  ಹಲವು ವರ್ಷಗಳ ಹಿಂದೆ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಬಡಜನರಿಗೂ ಶಿಕ್ಷಣ ನೀಡುವ ಕಾರ್ಯವನ್ನು ಮಾಡಿದ್ದಾರೆ ಅವರು ಇಂದಿನ ಯುವಜನಾಂಗಕ್ಕೆ ಮಾದರಿ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ದುಅ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಎಫ್.ಮುಹಮ್ಮದ್ ಬಾವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಪಾಣಕ್ಕಾಡ್ ಶಮೀರ್ ಅಲಿ ತಂಙಳ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಮ್.ಎ.ಗಫೂರ್, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬಿ.ಎ. ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಡಾ. ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಎಮ್‌ಜೆಎಂ ಫರಂಗಿಪೇಟೆ ಕಾರ್ಯದರ್ಶಿ ಹಾಜಿ ಎ.ಯೂಸುಫ್ ಅಲಂಕಾರ್, ಮಂಗಳೂರು ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಹಾಜಿ, ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೋಡಾಜೆ, ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಅರಫಾ ಗ್ರೂಫ್ ತುಂಬೆಯ ಅಬ್ದುಲ್ ಲತೀಫ್, ಫರಂಗಿಪೇಟೆ ರಾಜಧಾನಿ ಜ್ಯುವೆಲ್ಲರ್‍ಸ್‌ನ ಶುಕುರ್, ಉದ್ಯಮಿಗಳಾದ ಅಬ್ದಲ್ ಮೋನು, ಅಬ್ದುಲ್ ರಶೀದ್, ಮಂಗಳೂರು ಫಿಶ್ ಮರ್ಚೆಂಟ್‌ನ ಇಸ್ಮಾಯೀಲ್ ಕೆಇಎಲ್, ಕಣ್ಣೂರು ಅಶೋಕ್ ಬೀಡಿಯ ಹಾಜಿ ಮುಹಮ್ಮದ್, ವಳಿಬೈಲ್ ಜುಮಾ ಮಸೀದಿಯ ಗೌರವಾಧ್ಯಕ್ಷ ಝಫರುಲ್ಲಾ ಒಡೆಯರ್, ಸಲೀಂ ಟೈಲರ್ ಫರಂಗಿಪೇಟೆ, ಬೈಕಂಡಿ ಚಿಕನ್ ಸ್ಟಾಲ್‌ನ ಹಂಝ, ಮಾಹಿನ್ ದಾರಿಮಿ ಪಾತೂರು, ಮಂಗಳೂರು ಟಿಆರ್‌ಎಫ್ ಗೌರವ ಸಲಹೆಗಾರ ರಫೀಕ್ ಮಾಸ್ಟರ್, ಝುಬೈರ್ ಸಜಿಪಪಡು, ಬಿ.ಕೆ.ಇದಿನಬ್ಬ ಸಹಿತ ಮೊದಲಾದವರು ಉಪಸ್ಥಿತರಿದ್ದರು.

ಜಿಪಂ ಮಾಜಿ ಸದಸ್ಯ ಎಫ್.ಉಮರ್ ಫಾರೂಕ್ ಪ್ರಾಸ್ತಾವಿಸಿ ಸ್ವಾಗತಿಸಿದರು. ಅಬ್ದುಲ್ ಹಮೀದ್ ಗೋಳ್ತಮಜಲು ಧನ್ಯವಾದಗೈದರು. ಮಾಸ್ಟರ್ ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು. ಫರಂಗಿಪೇಟೆ ಜುಮಾ ಮಸೀದಿ ಮತ್ತು ಖಿದ್‌ಮತ್ತುಲ್ ಇಸ್ಲಾಮ್ ಅಸೋಸಿಯೇಶನ್‌ನ ಸರ್ವ ಸದಸ್ಯರು ಈ ಸಂದರ್ಭ ಸಹಕರಿಸಿದರು.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts