ಫೆ.25ರಂದು ನಡೆದ ಬಂದ್ ವೇಳೆ ಕೆಎಸ್ಸಾರ್ಟಿಸಿ ಬಸ್ಸುಗಳಿಗೆ ಕಲ್ಲೆಸೆದು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಈ ಸಂಬಂಧ ಪೊಲೀಸರು ನಾಲ್ವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅದೇ ರೀತಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲೂ ಒಂದು ಪ್ರಕರಣ ದಾಖಲಾಗಿದ್ದು, ಅಚ್ಚುತ ಎಂಬ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Be the first to comment on "ಕಲ್ಲೆಸೆದು ಹಾನಿ, ಐವರ ದಸ್ತಗಿರಿ"