ಬಂಟ್ವಾಳ

ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನಲ್ಲಿ ಕ್ಯಾನ್ಸರ್ ಅರಿವು

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನಲ್ಲಿ ಗರ್ಭಕೋಶ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ಬಗೆಗಿನ ಅರಿವು ಕಾರ್ಯಕ್ರಮವನ್ನು ಮಂಗಳೂರಿನ ವೈದ್ಯ ಡಾ.ರೋಹನ್ ಗಟ್ಟಿ ಉದ್ಘಾಟಿಸಿದರು.

ರೋಗ ಬಾರದ ರೀತಿಯಲ್ಲಿ ಮುಂಜಾಗೃತ ಕ್ರಮ ಕೈಗೊಳ್ಳುವುದು ಇಂದಿನ ತುರ್ತು ಅವಶ್ಯಕತೆ ಎಂದರು. ಪ್ರತಿಯೊಂದು ದೇಹಕ್ಕೂ ವಿವಿಧ ರೀತಿಯ ರೋಗವು ಭಾದಿಸುತ್ತಿರುತ್ತವೆ. ಕಾಯಿಲೆ ಬಾರದ ರೀತಿಯಲ್ಲಿ ಪ್ರತಿಯೊಬ್ಬನೂ ಎಚ್ಚರವಹಿಸುವುದು ಅಗತ್ಯ. ನಮ್ಮ ಸುತ್ತಣ ಪರಿಸರ ಮತ್ತು ನಮ್ಮ ಆಹಾರ ಪದ್ಧತಿಯೂ ನಮಗೆ ಆವರಿಸುವ ಮಾರಕ ಕಾಯಿಲೆಗಳಿಗೆ ಕಾರಣ. ರೋಗ ಪರಿಹಾರಕ್ಕಿಂತ ಅದರ ತಡೆಗಟ್ಟುವಿಕೆಯ ಕಡೆ ನಾವು ಗಮನ ನೀಡಬೇಕು. ಆರೋಗ್ಯವೇ ಭಾಗ್ಯ ಎಂಬುದನ್ನು ಅರಿತು ನಾವಿಂದು ಬದುಕಬೇಕಾಗಿದೆ ಎಂದವರು ಹೇಳಿದರು.
ಸ್ತ್ರೀ ರೋಗ ತಜ್ಞೆ ಭಾಗ್ಯಶ್ರೀ ಬಾಳಿಗಾ ಗರ್ಭಕೋಶದ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿದರು.  ಇಂಡಿಯನ್ ಮೆಡಿಕಲ್ ಎಸೋಸಿಯೇಶನ್ ಬಂಟ್ವಾಳ ಅಧ್ಯಕ್ಷರಾದ ಡಾ. ಅಶ್ವಿನ್ ಬಾಳಿಗಾ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಸ್ವಾಗತಿಸಿದರು. ಇಂಡಿಯನ್ ಮೆಡಿಕಲ್ ಎಸೋಸಿಯೇಶನ್ ಬಂಟ್ವಾಳ ಇದರ ಕಾರ್ಯದರ್ಶಿ ಡಾ. ಮಹೇಶ್ ಭಟ್ ವಂದಿಸಿದರು. ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳ ೪೦ ಶಿಕ್ಷಕಿಯರು, ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನ ಉಪನ್ಯಾಸಕಿಯರು ಮತ್ತು ವಿದ್ಯಾರ್ಥಿಗಳು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇಂಡಿಯನ್ ಮೆಡಿಕಲ್ ಎಸೋಸಿಯೇಶನ್ ಬಂಟ್ವಾಳ ಮತ್ತು ಮಂಗಳೂರು ಇನ್ಸೂಟ್ಯೂಟ್ ಆಫ್ ಅಂಕೋಲಜಿ ಹಾಗೂ ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನ ಲೇಡಿಸ್ ಕ್ಲಬ್ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts