ಜಿಲ್ಲಾ ಸುದ್ದಿ

ದ.ಕ. ಜಿಲ್ಲೆಯ 21 ಶಾಲೆಗಳಿಗೆ ಪರಿಸರ ಮಿತ್ರ ಪ್ರಶಸ್ತಿ

ದ.ಕ ಜಿಲ್ಲೆಯ 21 ಶಾಲೆಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ ಪರಿಸರ ಮಿತ್ರ ಶಾಲೆ ಪ್ರಶಸ್ತಿಗೆ ಆಯ್ಕೆಯಾಗಿವೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ , ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವರ ಸಹಯೋಗದೊಂದಿಗೆ ಮಾ.3 ರಂದು ಬೆಳಿಗ್ಗೆ 11 ಗಂಟೆಗೆ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ. ಪ್ರಶಸ್ತಿ ವಿಜೇತ ಶಾಲೆಗಳಿಗೆ ನಗದು ಬಹುಮಾನ, ಪ್ರಮಾಣಪತ್ರ, ಫಲಕಗಳನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಪ್ರದಾನ ಮಾಡಲಿದ್ದಾರೆ.

ಪ್ರಶಸ್ತಿ ವಿಜೇತ ಶಾಲೆಗಳ ವಿವರ:
ಜಿಲ್ಲಾ ಪರಿಸರ ಮಿತ್ರ ಶಾಲೆ- ಸುದಾನ ವಸತಿಯುತ ಶಾಲೆ, ಪುತ್ತೂರು.
ಜಿಲ್ಲಾ ಹಸಿರು ಶಾಲೆಗಳು – ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆ, ದ.ಕ ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯ, ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಬೆಳ್ತಂಗಡಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಚೇರು ಬಿಳಿನೆಲೆ ಪುತ್ತೂರು, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ದೇವರಕಾನ ಸುಳ್ಯ, ಶ್ರೀ ರಾಮಕುಂಜೇಶ್ವರ ಸಂಸ್ಕøತ ಹಿರಿಯ ಪ್ರಾಥಮಿಕ ಶಾಲೆ ರಾಮಕುಂಜ ಪುತ್ತೂರು, ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು, ಸರ್ಕಾರಿ ಪ್ರೌಢಶಾಲೆ ಬೆಟ್ಟಂಪಾಡಿ ಇರ್ದೆ ಉಪ್ಪಳಿಗೆ, ದ.ಕ ಜಿ.ಪಂ. ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರ್, ಸರಕಾರಿ ಪ್ರೌಢಶಾಲೆ ಕೊಕ್ರಾಡಿ ಬೆಳ್ತಂಗಡಿ.
ಜಿಲ್ಲಾ ಹಳದಿ ಶಾಲೆಗಳು – ದ.ಕ ಜಿ.ಪಂ. ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಏಕತ್ತಡ ಪುತ್ತೂರು, ನವೋದಯ ಪ್ರೌಢಶಾಲೆ ಬೆಟ್ಟಂಪಾಡಿ, ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಿರೇಬಂಡಾಡಿ ಪುತ್ತೂರು, ದ.ಕ ಜಿ.ಪಂ. ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಿಳಿನೆಲೆ-ಕೈಕಂಬ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕ ಪುತ್ತೂರು, ದ.ಕ ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ರೆಂಜಿಲಾಡಿ ಪುತ್ತೂರು, ದ.ಕ ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಸುರಿಬೈಲು ಬಂಟ್ವಾಳ, ದ.ಕ ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಜಿ ಬಂಟ್ವಾಳ, ದ.ಕ ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆ ಚೆನ್ನಾವರ ಪಾಲ್ತಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮೈ ಆನಡ್ಕ ಬಂಟ್ವಾಳ.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.