ಪಶುಭಾಗ್ಯ ಯೋಜನೆ ಮೂಲಕ ಆರ್ಥಿಕ ಸ್ವಾವಲಂಬನೆ: ರೈ

ಹೈನುಗಾರಿಕೆಗೆ ಪ್ರೋತ್ಸಾಹ ಒದಗಿಸುವ ಉದ್ದೇಶದಿಂದ ಸರಕಾರ ಜಾರಿಗೆ ತಂದಿರುವ ಪಶುಭಾಗ್ಯ ಯೋಜನೆ ಮೂಲಕ ಆರ್ಥಿಕ ಸ್ವಾವಲಂಬನೆ ದೊರಕುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಭವನದಲ್ಲಿ ಪಶುಸಂಗೋಪನಾ ಇಲಾಖೆ ಹಮ್ಮಿಕೊಂಡಿರುವ ಪಶುಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಿಸಿ ಅವರು ಮಾತನಾಡಿದರು.

ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಟಿ.ತಿಪ್ಪೇಸ್ವಾಮಿ ಯೋಜನೆಯ ವಿವರ ನೀಡಿದರು. ಸಹಾಯಕ ನಿರ್ದೇಶಕ ಡಾ. ಹೆನ್ರಿ ಲಸ್ರಾದೋ ಪ್ರಸ್ತಾವನೆಗೈದರು. ಡಾ. ರವಿಕುಮಾರ್ ಸ್ವಾಗತಿಸಿ ಡಾ. ಪ್ರಸನ್ನ ಕುಮಾರ್ ವಂದಿಸಿದರು.

ಪಶುಭಾಗ್ಯ ಯೋಜನೆಯ ಫಲಾನುಭವಿಗಳಿಗೆ ರೂ.26.70 ಲಕ್ಷ ಸಹಾಯಧನ ಈ ಸಂದರ್ಭ ವಿತರಿಸಲಾಯಿತು.