ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ಅಕ್ರಮವಾಗಿ ದಾಸ್ತಾನಿಟ್ಟಿದ್ದ ಮರಳನ್ನು ಬಂಟ್ವಾಳ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಲಾರಿಯೊಂದನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆಸೀಫ್ ಮತ್ತು ಅನ್ಸಾರ್ ಆರೋಪಿಗಳು. ಗುರುವಾರ ಸಂಜೆ ಖಚಿತ ವತ೯ಮಾನದ ಮೇರೆಗೆ ಪ್ರೊಬೇಷನರಿ ಐಪಿಎಸ್ ಅಧಿಕಾರಿ ನಾಗೇಶ್ ಡಿ.ಎಲ್., ಬಂಟ್ವಾಳ ನಗರ ಠಾಣಾ ಎಸ್ ಐ ರಕ್ಷಿತ್ ನೇತೃತ್ವದ ತಂಡ ದಾಳಿ ನಡೆಸಿದ್ದರು.
ಈ ಸಂದರ್ಭ ಅಕ್ರಮವಾಗಿ ದಾಸ್ತಾನಿಟ್ಟಿದ್ದ ಸುಮಾರು 150ಕ್ಕೂ ಹೆಚ್ಚು ಲೋಡ್ ನಷ್ಟು ಮರಳನ್ನು ಪತ್ತೆಹಚ್ಚಿ ಮುಟ್ಟುಗೋಲು ಹಾಕಲಾಯಿತು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಲಡ್ಕ ವಲಯದ 7 ಒಕ್ಕೂಟಗಳ ಪದಗ್ರಹಣ ಸಮಾರಂಭ | ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕಾರ್ಯಕ್ರಮ (more…)
| ರಾಯಿ ಗ್ರಾಮ ಪಂಚಾಯಿತಿ: 19 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ (more…)