ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದೆ ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ ನೀಡಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಯು.ಟಿ. ಖಾದರ್ ಹೇಳಿದರು.
ತುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರ್ಲಬೈಲು, ಮುದೆಲ್ ಪಡ್ಪು, ಖಬರಸ್ಥಾನಗಳಿಗೆ ಸಂಪರ್ಕಿಸುವ ರಸ್ತೆ ಡಾಮಾರೀಕರಣ ಕಾಮಗಾರಿಯನ್ನು ಭಾನುವಾರ ಸಂಜೆ ಉದ್ಘಾಟಿಸಿ ಬಳಿಕ ತುಂಬೆ ವಲಯ ಕಾಂಗ್ರೆಸ್ ವತಿಯಿಂದ ನಡೆದ ಸನ್ಮಾನ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ರಸ್ತೆ ನಿರ್ಮಾಣಕ್ಕೆ ಸ್ಥಳ ದಾನಿಗಳಾದ ಬಿ.ಎ. ಗ್ರೂಪ್‌ನ ಸಂಸ್ಥಾಪಕ ಬಿ. ಅಹಮ್ಮದ್ ಹಾಜಿ ಮೊಯ್ದೀನ್ ಹಾಗೂ ಬಸ್ತಿ ವಾಮನ ಶೆಣೈ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ತುಂಬೆ ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಮಜಿ ಅಧ್ಯಕ್ಷತೆ ವಹಿಸಿದ್ದರು. ಗೇರು ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಉಮ್ಮರ್ ಫಾರೂಕ್, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುದು ಗ್ರಾ.ಪಂ.ಉಪಾಧ್ಯಕ್ಷ ಹಾಶೀರ್ ಪೇರಿಮಾರ್, ಬೋಳಿಯಾರ್ ತಾ.ಪಂ.ಸದಸ್ಯ ಜಬ್ಬಾರ್, ತುಂಬೆ ಜುಮ್ಮಾ ಮಸೀದಿ ಖತೀಬರಾದ ಅಬ್ದುಲ್ ಲತೀಫ್ ಫೈಝಿ, ಮಸೀದಿ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಪ್ರಕಾಶ್ ಶೆಟ್ಟಿ ಶ್ರೀಶೈಲಾ, ಪ್ರವೀಣ್, ಮಹಾಬಲ ವೇದಿಕೆಯಲ್ಲಿದ್ದರು. ಪುದು ಗ್ರಾ.ಪಂ.ಸದಸ್ಯರಾದ ರಮ್ಲಾನ್, ಇಕ್ಬಾಲ್ ಸುಜೀರ್ ಹಾಜರಿದ್ದರು.
ನಿಸಾರ್ ಅಹಮ್ಮದ್ ಸ್ವಾಗತಿಸಿ, ಅಬ್ದುಲ್ ರಶೀದ್ ಕಾರ್ಯಕ್ರಮ ನಿರೂಪಿಸಿದರು.