ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮ: ರಮಾನಾಥ ರೈ

ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದ ಸರ್ವತೋಮುಖ ಪ್ರಗತಿಗಾಗಿ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದರು.

ಅವರು ಕೇಪು ಕಲ್ಲಂಗಳ ಸರಕಾರಿ ಪ್ರೌಢಶಾಲಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಂಸದ ನಳಿನ್ ಕುಮಾರ್ ಕಟೀಲು, ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ, ರಾಜ್ಯ ವಿಧಾನ ಪರಿಷತ್ ಪ್ರತಿಪಕ್ಷ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್, ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಯಶ್ರೀ ಕೋಡಂದೂರು, ಎಂ.ಎಸ್. ಮಹಮ್ಮದ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ತಾಲೂಕು ಪಂಚಾಯಿತಿ ಸದಸ್ಯರಾದ ಕವಿತಾ ಸುಬ್ಬ ನಾಯ್ಕ್, ಪದ್ಮನಾಭ ನಾಯ್ಕ್, ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ, ಉಪಾಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ, ಸದಸ್ಯರಾದ ನಿರಂಜನ ನಾಯ್ಕ್, ರತ್ನಾ, ದಿವ್ಯಾ, ಎಸ್.ಡಿ.ಎಂ.ಸಿ.ಯ ಅಧ್ಯಕ್ಷ ಅಬ್ದುಲ್ ಕರೀಂ ಕುದ್ದುಪದವು, ಕ್ಷೇತ್ರ ಶಿಕ್ಷಣಾಕಾರಿ ಲೋಕೇಶ ಸಿ., ಬಿ.ಆರ್.ಸಿ.ಸಿ. ರಾಜೇಶ್, ಮುಖ್ಯ ಶಿಕ್ಷಕಿ ಮಾಲತಿ ಕೆ, ಶಿಕ್ಷಕರಾದ ರಮೇಶ ಎಂ. ಬಾಯಾರ್, ಸುಬ್ರಹ್ಮಣ್ಯ ಭಟ್, ಲಕ್ಷ್ಮಣ ಟಿ. ನಾಯಕ್, ಲಿಂಗಪ್ಪ ನಾಯ್ಕ, ಪುಷ್ಪಾ, ಗೌರಿದೇವಿ ರಮೇಶ ಡಿ, ಎಸ್.ಡಿ.ಎಂ.ಸಿ ಸದಸ್ಯರಾದ ಮಹಮ್ಮದ್ ಕಲ್ಲಂಗಳ, ಉಮೇಶ ಗೌಡ, ಬಾಬು ನಾಯ್ಕ್, ದೇವದಾಸ ರೈ ಕೇಪುಗುತ್ತು, ಬಾಲಕೃಷ್ಣ ಶೆಟ್ಟಿ ಬೇಂಗ್ರೋಡಿ, ಗಾಯತ್ರಿ ವಿ,ಜಿ, ಪ್ರಭಾವತಿ ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ