ದೆಹಲಿ ರಮಜಸ್ ಕಾಲೇಜಿನಲ್ಲಿ ವಿಚಾರಸಂಕಿರಣ ನಡೆಯುವುದನ್ನು ವಿರೋಧಿಸಿ ಎಬಿವಿಪಿ ನಡೆಸಿದ ಪ್ರತಿಭಟನೆ ಸಂದರ್‍ಭ ಅಧ್ಯಾಪಕರು, ವಿದ್ಯಾರ್‍ಥಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕ್ಯಾಂಪಸ್ ಫ್ರಂಟ್ ದಕ ಜಿಲ್ಲಾ ಸಮಿತಿ ಸದಸ್ಯ ಫಯಾಝ್.ಎಂ ಮಾತನಾಡಿ ಬಿಜೆಪಿ ಅಧಿಕಾರಕ್ಕೇರಿದ ಬಳಿಕ ದಾಂಧಲೆಯ ಮಿತಿ ಮೀರಿದೆ ಎಂದರು.
ಪ್ರತಿಭಟನಾ ಸಭೆಯಲ್ಲಿ ಕ್ಯಾಂಪಸ್ ಫ್ರಂಟ್ ಬಂಟ್ವಾಳ ತಾಲೂಕು ಅಧ್ಯಕ್ಷ ಅಶ್ವಾನ್ ಸಾದಿಕ್, ತಾಲೂಕು ಉಪಾಧ್ಯಕ್ಷ ಮುಹಮ್ಮದ್ ಶಂಶೀರ್, ತಾಲೂಕು ಕಾರ್ಯದರ್ಶಿ ಫಹದ್ ಅನ್ವರ್ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…