ಜಿಲ್ಲಾ ಸುದ್ದಿ

ಮೃತ ಯೋಧ ಕುಟುಂಬಕ್ಕೆಆರ್ಥಿಕ ನೆರವು: ಮುಖ್ಯಮಂತ್ರಿಗೆ ಉಸ್ತುವಾರಿ ಸಚಿವರ ಮನವಿ

ಕಳೆದ ವರ್ಷ ಜುಲೈಯಲ್ಲಿ ಸೇವೆಯಲ್ಲಿದ್ದಾಗ ಮೃತಪಟಟ್ ವಾಯುಸೇನೆಯ ಯೋಧ, ಬೆಳ್ತಂಗಡಿ ತಾಲೂಕಿನ ಏಕನಾಥ ಅವರ ಕುಟುಂಬಕ್ಕೆ ಆರ್ಥಿಕ ನೆರವನ್ನು ಮಂಜೂರು ಮಾಡುವಂತೆ ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಚೆನ್ನೈ ತಾಂಬರಂ ವಾಯುನೆಲೆಯಿಂದ ಅಂಡಮಾನ್‍ಗೆ ವಾಯಸೇನೆಯ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ವಿಮಾನವು ಕಳೆದ ವರ್ಷ ಜುಲೈ 22ರಂದು ನಿಗೂಡವಾಗಿ ಕಾಣೆಯಾಗಿ, ಬಳಿಕ ಯೋಧರು ಬದುಕುಳಿಯುವ ಸಾಧ್ಯತೆ ಇಲ್ಲದ್ದರಿಂದ ವಾಯುಸೇನೆಯು ಏಕನಾಥ್ ಹಾಗೂ ಇತರ ಯೋಧರ  ಮರಣ ಪ್ರಮಾಣಪತ್ರ ನೀಡಿದೆ. ಯೋಧನ ಕುಟುಂಬವು ಆರ್ಥಿಕವಾಗಿ ಹಿಂದುಳಿದಿದ್ದು, ಮಕ್ಕಳ ಶೈಕ್ಷಣಿಕ ಹಾಗೂ ಕುಟುಂಬ ನಿರ್ವಹಣೆಯ ನೆಲೆಯಲ್ಲಿ ಏಕನಾಥ ಅವರ ಪತ್ನಿ ಜಯಂತಿ ಅವರಿಗೆ ನೆರವು ನೀಡುವಂತೆ ಉಸ್ತುವಾರಿ ಸಚಿವರು ಏಕನಾಥ ಅವರ ಕುಟುಂಬದ ಸದಸ್ಯರೊಂದಿಗೆ ಮಂಗಳವಾರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts