ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಪುರಸಭೆಯಿಂದ ಹಾಕಿರುವ ಕಸದ ರಾಶಿಗೆ ಯಾರೋ ಬೆಂಕಿ ಹಚ್ಚಿದ್ದಾರೆ.
ಇದರಿಂದ ಸುತ್ತಮುತ್ತ ಬೆಂಕಿ ವ್ಯಾಪಿಸಿದ್ದು, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ನಂದಿಸಬೇಕಾಯತು.
ಕೆಲ ಸಮಯದ ಹಿಂದೆ ಇದೇ ರೀತಿ ಇಲ್ಲಿ ಕಸದ ರಾಶಿಗೆ ಬೆಂಕಿ ಬಿದ್ದಿತ್ತು.
ಇದೀಗ ಮತ್ತೆ ಇಲ್ಲಿ ಕಸದ ರಾಶಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕಾರ್ಮಿಕರೇ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸುತ್ತಮುತ್ತಲಿನ ಮರ ಗಿಡಗಳಿಗೆ ಬೆಂಕಿಯ ಜ್ವಾಲೆ ತಗಲಿದ್ದು ಸುದ್ದಿ ತಿಳಿದ ಬಂಟ್ವಾಳ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್ ನಲ್ಲಿ ಕಸದ ರಾಶಿಗೆ ಬೆಂಕಿ"