ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕ್ಷೇತ್ರಕ್ಕೆ ಗುರುವಾರ ಭೇಟಿ ನೀಡಿ, ಶ್ರೀ ದೇವರ ಆಶೀರ್ವಾದ ಪಡೆದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಪದ್ಮಶೇಖರ ಜೈನ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸಂಪತ್ ಕುಮಾರ್ ಶೆಟ್ಟಿ, ಪ್ರಮುಖರಾದ ಪದ್ಮಪ್ಪ ಪೂಜಾರಿ, ನಾರಾಯಣ ಶೆಟ್ಟಿ ಹೊಳ್ಳರಗುತ್ತು ಮೊದಲಾದವರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…