ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ನ್ಯಾಯಾಂಗ ಇಲಾಖೆ ವತಿಯಿಂದ ನಿರ್ಮಿಸಲಾಗುವ ನ್ಯಾಯಾಶರ ವಸತಿ ಸಂಕೀರ್ಣಕ್ಕೆ ಬಂಟ್ವಾಳ ಬಿ.ಸಿ.ರೋಡಿನ ಬಿ.ಮೂಡ ಪರ್ಲಿಯಾ ಬಳಿ ಶಿಲಾನ್ಯಾಸ ಕಾರ್ಯಕ್ರಮವನ್ನು ಹೈಕೋರ್ಟ್ ನ್ಯಾಯಾಶ ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಾಶ ಜಸ್ಟೀಸ್ ಎ.ಎನ್.ವೇಣುಗೋಪಾಲ್ ಗೌಡ ಉಪಸ್ಥಿತಿಯಲ್ಲಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶ ಜಸ್ಟೀಸ್ ಎಸ್. ಅಬ್ದುಲ್ ನಜೀರ್ ನೆರವೇರಿಸಿದರು.
ಈ ಸಂದರ್ಭ ಹೆದ್ದಾರಿಯಿಂದ ದೂರ ಸುಮಾರು ೨ರಿಂದ ೩ ಕಿ.ಮೀ. ಪರಿಸರದಲ್ಲಿ ಸೂಕ್ತವಾದ ೩ರಿಂದ ೫ ಎಕರೆ ಜಾಗವನ್ನು ಗುರುತಿಸಿ, ಅಲ್ಲಿ ಕೋರ್ಟ್ ಕಾಂಪ್ಲೆಕ್ಸ್ ನಿರ್ಮಿಸಲು ಅವಕಾಶ ಕಲ್ಪಿಸುವಂತೆ ಅವರು ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಸೂಚಿಸಿದರು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಹೈಕೋರ್ಟ್ ನ್ಯಾಯಾಶರಾದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ, ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭಾಗವಹಿಸಿದ್ದರು.
ಸಮಾರಂಭದಲ್ಲಿ ದ.ಕ. ಜಿಲ್ಲಾ ಮತ್ತು ಸತ್ರ ನ್ಯಾಯಾಶ ಕೆ.ಎಸ್.ಬೀಳಗಿ, ಹಿರಿಯ ಸಿವಿಲ್ ನ್ಯಾಯಾಶ ಚಂದ್ರಶೇಖರ ಯು, ಪ್ರಧಾನ ಸಿವಿಲ್ ನ್ಯಾಯಾಶ ಮಹೇಶ್ ಆರ್, ಮ್ಯಾಜಿಸ್ಟ್ರೇಟ್ ಪ್ರತಿಭಾ ಡಿ.ಎಸ್, ಬಂಟ್ವಾಳ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಲೋಕೋಪಯೋಗಿ ಎಕ್ಸಿಕ್ಯುಟಿವ್ ಇಂಜಿನಿಯರ್ ಗಣೇಶ್ ಆರ್.ಅರಳೀಕಟ್ಟಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್, ವಕೀಲರ ಸಂಘದ ಅಧ್ಯಕ್ಷ ಬಿ.ವಿ.ಶೆಣೈ, ಕಾರ್ಯದರ್ಶಿ ರಾಜಾರಾಮ ನಾಯಕ್, ಪುರಸಭಾ ಮುಖ್ಯಾಕಾರಿ ಎಂ.ಎಚ್.ಸುಧಾಕರ್ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಬಂಟ್ವಾಳದಲ್ಲಿ ಕೋರ್ಟ್ ಕಾಂಪ್ಲೆಕ್ಸ್ ಗೆ ಜಾಗ ನಿಗದಿಗೊಳಿಸಲು ಸೂಚನೆ"