ಎಂಡೋ ಪೀಡಿತರ ನೆರವಿಗೆ ಸಂಚಾರಿ ಆರೋಗ್ಯ ಘಟಕ ಸೇವೆ

ಎಂಡೋಸಲ್ಫಾನ್ ಪುನರ್‌ವಸತಿ ಕಾರ್ಯಕ್ರಮದಡಿಯಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯದ ಬೆಳ್ಳಾರೆ ಮತ್ತು ವಿಟ್ಲ-ಮೂಡಬಿದ್ರೆಯನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯಾಚರಿಸಲಿರುವ ನಾಲ್ಕು ಸಂಚಾರಿ ಆರೋಗ್ಯ ಘಟಕ ಸೇವೆಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಬಿ.ಸಿ.ರೋಡಿನಲ್ಲಿ ಚಾಲನೆ ನೀಡಿದರು.

ಘಟಕದಲ್ಲಿ ಫಿಸಿಯೋಥಿರಪಿಸ್ಟ್, ಶುಶ್ರೂಷಕಿ, ಸಹಾಯಕರೊಳಗೊಂಡ ತಂಡ ಫಿಸಿಯೋಥೆರಫಿ ಚಿಕಿತ್ಸೆ ನೀಡಲಿದ್ದು ಪ್ರತೀ ತಿಂಗಳಲ್ಲಿ ಎರಡು ಬಾರಿ ಎಂಡೋಸಲ್ಫಾನ್ ಸಂತ್ರಸ್ಥರ ಮನೆಗೆ ಭೇಟಿ ನೀಡಿ ಚಿಕಿತ್ಸೆ ನೀಡಲಿದೆ ಎಂದು ಸಚಿವ ರಮಾನಾಥ ರೈ ಈ ಸಂದರ್ಭದಲ್ಲಿ ಹೇಳಿದರು.

ಇದೇ ವೇಳೆ ಸರ್ವ ಶಿಕ್ಷಣ ಅಭಿಯಾನದಡಿ ವಿಕಲಚೇತನ ಫಲಾನುಭವಿಗಳಿಗೆ ಗಾಲಿಕುರ್ಚಿ ಸಹಿತ ವಿವಿಧ ಸಲಕರಣೆಗಳನ್ನು ಸಚಿವರು ವಿತರಿಸಿದರು. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ರವೀಂದ್ರ ಕಂಬಳಿ, ಮಂಜುಳ ಮಾವೆ, ಕಮಲಾಕ್ಷಿ ಪೂಜಾರಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷಿ ಬಂಗೇರ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಆರೋಗ್ಯಾಧಿಕಾರಿ ದೀಪಾ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಡಾ. ಅರುಣ್ ಕುಮಾರ್, ತಹಶೀಲ್ದಾರ್ ಪುರಂದರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ತಾಪಂ ಇಒ ಸಿಪ್ರಿಯಾನ್ ಮಿರಾಂದ ಸ್ವಾಗತಿಸಿ ವಂದಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎಂಡೋ ಪೀಡಿತರ ನೆರವಿಗೆ ಸಂಚಾರಿ ಆರೋಗ್ಯ ಘಟಕ ಸೇವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*