ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ಎಲ್ಲಾ 17 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ಬಂದಿರುತ್ತದೆ.
ರೆನಿಟಾ ಮರಿಯಾ ಕಾರ್ಡೋಜ ಮತ್ತು ಅನ್ವಿತ್ ಅಮೀನ್ ಇವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಶಾಲೆಯ ಚಿತ್ರಕಲಾ ಶಿಕ್ಷಕರಾದ ಹರೀಶ ಎಂ ಆಚಾರ್ಯ ಇವರು ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲೆಯ ಪ್ರ್ರಾಂಶುಪಾಲೆ ರಮಾ ಶಂಕರ್ ಸಿ ಅಭಿನಂದಿಸಿದ್ದಾರೆ.