ಬಿ.ಜೆ.ಪಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ದಿನಾಂಕ 16ರಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಅನಿಯಂತ್ರಿತವಾಗಿ ಏರಿಕೆಯಾಗುತ್ತಿರುವ ಪರಿಣಾಮವಾಗಿ ದಿನಬಳಕೆಯ ಸಾಮಾಗ್ರಿಗಳ ಬೆಲೆಯು ಗಗನಕ್ಕೇರುತ್ತಿದೆ. ಅಡುಗೆ ಅನಿಲದ ಬೆಲೆಯೇರಿಕೆಯಿಂದ ಬಡಜನತೆ ಬವಣೆಪಡುವಂತಾಗಿದೆ. ಬ್ಯಾಂಕುಗಳು ಸೇವಾ ಶುಲ್ಕದ ರೂಪದಲ್ಲಿ ಗ್ರಾಹಕರಿಂದ ಅಧಿಕ ಶುಲ್ಕ ವಸೂಲಿ ಮಾಡುತ್ತಿರುವುದಕ್ಕೆ ಸರಕಾರ ಮೌನ ಸಮ್ಮತಿ ನೀಡಿದೆ. ಕೇಂದ್ರ ಸರಕಾರದ ಈ ಜನವಿರೋಧಿ ನೀತಿಯನ್ನು ಖಂಡಿಸಿ ಈ ಪ್ರತಿಭಟನೆ ನಡೆಯಲಿದ್ದು ಕಾಂಗ್ರೆಸ್ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ಪಕ್ಷದ ಪಧಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ತಿಳಿಸಿರುತ್ತಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)