ಬಂಟ್ವಾಳ

ಬೆಲೆ ಏರಿಕೆ ವಿರೋಧಿಸಿ 16ರಂದು ಕಾಂಗ್ರೆಸ್ ಪ್ರತಿಭಟನೆ

ಬಿ.ಜೆ.ಪಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ದಿನಾಂಕ 16ರಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಅನಿಯಂತ್ರಿತವಾಗಿ ಏರಿಕೆಯಾಗುತ್ತಿರುವ ಪರಿಣಾಮವಾಗಿ ದಿನಬಳಕೆಯ ಸಾಮಾಗ್ರಿಗಳ ಬೆಲೆಯು ಗಗನಕ್ಕೇರುತ್ತಿದೆ. ಅಡುಗೆ ಅನಿಲದ ಬೆಲೆಯೇರಿಕೆಯಿಂದ ಬಡಜನತೆ ಬವಣೆಪಡುವಂತಾಗಿದೆ. ಬ್ಯಾಂಕುಗಳು ಸೇವಾ ಶುಲ್ಕದ ರೂಪದಲ್ಲಿ ಗ್ರಾಹಕರಿಂದ ಅಧಿಕ ಶುಲ್ಕ ವಸೂಲಿ ಮಾಡುತ್ತಿರುವುದಕ್ಕೆ ಸರಕಾರ ಮೌನ ಸಮ್ಮತಿ ನೀಡಿದೆ. ಕೇಂದ್ರ ಸರಕಾರದ ಈ ಜನವಿರೋಧಿ ನೀತಿಯನ್ನು ಖಂಡಿಸಿ ಈ ಪ್ರತಿಭಟನೆ ನಡೆಯಲಿದ್ದು ಕಾಂಗ್ರೆಸ್ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ಪಕ್ಷದ ಪಧಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ತಿಳಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ