ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪ್ರಿಯ ಮಾತ್ರವಲ್ಲದೇ, ಪ್ರಾಯೋಗಿಕವಾಗಿ ಕಾರ್ಯಸಾಧ್ಯ ಬಜೆಟ್ ಆಗಿದೆ ಎಂದು ಆಹಾರ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಸಮಾಜದ ಎಲ್ಲಾ ವರ್ಗದ ಏಳಿಗೆಯ ಹಿತದೃಷ್ಠಿಯನ್ನಿಟ್ಟುಕೊಂಡು ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನ ಹೆಚ್ಚಿಸಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ನೀಡುವ ಅಕ್ಕಿಯನ್ನು 5 ಕೆ.ಜಿ.ಯಿಂದ 7 ಕೆ.ಜಿ.ಗೆ ಹೆಚ್ಚಿಸಲಾಗಿದೆ. ಗ್ಯಾಸ್ ಸಂಪರ್ಕ ಇಲ್ಲದವರಿಗೆ ಉಚಿತ ಗ್ಯಾಸ್ ಸಂಪರ್ಕ ನೀಡುವ ಯೋಜನೆ, ವೃದ್ಧಾಶ್ರಮ, ಅನಾಥಾಲಯ, ಹಾಸ್ಟೆಲ್‍ಗಳಿಗೆ ಉಚಿತ ಅಕ್ಕಿ, ಕಡಿಮೆ ದರದಲ್ಲಿ ಆಹಾರ ಒದಗಿಸುವ ‘ನಮ್ಮ ಕ್ಯಾಂಟೀನ್” ಸೇರಿದಂತೆ ಸಮಾಜದ ದುರ್ಬಲರ ಏಳಿಗೆಯನ್ನು ಬಜೆಟ್ ಗುರಿಯಾಗಿರಿಸಿದೆ. ಜಿ.ಪಂ. ತಾ.ಪಂ. ಸದಸ್ಯರ ಗೌರವಧನ ಹೆಚ್ಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಮಹತ್ತರ ಯೋಜನೆಗಳನ್ನು ಪ್ರಕಟಿಸಲಾಗಿದೆ. ಮಂಗಳೂರು ವಿವಿಯಲ್ಲಿ ಬ್ಯಾರಿ ಅಧ್ಯಯನ ಪೀಠ, ಹಜ್ ಭವನ, ವಿಮಾನ ನಿಲ್ದಾಣ ಅಭಿವೃದ್ಧಿ, ಪಶ್ಚಿಮವಾಹಿನಿಗೆ 100 ಕೋಟಿ ರೂ., ಮೂಡಬಿದ್ರೆ, ಕಡಬ ತಾಲೂಕು ಸೇರಿದಂತೆ ಜಿಲ್ಲೆಯ ದೀರ್ಘ ಕಾಲದ ಬೇಡಿಕೆಗಳನ್ನು ಈಡೇರಿಸಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳನ್ನು ಅಭಿನಂದಿಸುವುದಾಗಿ ಸಚಿವ ಖಾದರ್ ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಾರ್ಯಸಾಧ್ಯ ಬಜೆಟ್: ಸಚಿವ ಯು.ಟಿ. ಖಾದರ್"