ರಾಜ್ಯ ಬಜೆಟ್ ಕುರಿತು ಬಿಜೆಪಿ ಕಟುವಾಗಿ ಟೀಕಿಸಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರೈತರ ಸಾಲ ಮನ್ನಾ ಮಾಡಲು ಕ್ರಮ ಕೈಗೊಳ್ಳದೇ ಇದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಜೆಟ್ ನಲ್ಲಿ ಸಾಲ ಮನ್ನಾ ಮಾಡುತ್ತಾರೆಂಬ ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಗಿದೆ. ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿಲ್ಲ. ಸಾಲ ಮನ್ನಾ ಮಾಡದೇ ಇರುವುದಕ್ಕೆ ರೈತ ಸಮುದಾಯದಲ್ಲಿ ಆತಂಕ ಉಂಟಾಗಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಕೂಡಲೇ ರೈತರ ಸಾಲ ಮನ್ನಾ ಮಾಡುವುದಕ್ಕೆ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ. ನಾವು ಅಧಿಕಾರದಲ್ಲಿರಬೇಕಾದರೆ ಅಂದಿನ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡದೇ 2 ಬಾರಿ ಸಾಲ ಮನ್ನಾ ಮಾಡಿದ್ದೆವು. ಆದ್ದರಿಂದ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದತ್ತ ಕೈತೋರಿಸದೇ ಸಾಲ ಮನ್ನಾ ಮಾಡಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ.
………………
ನೀರಸ ಬಜೆಟ್: ದೇವದಾಸ ಶೆಟ್ಟಿ
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…