ಜಿಲ್ಲಾ ಸುದ್ದಿ

ರೈತರಿಗೆ ಧೈರ್ಯ ನೀಡದ ಬಜೆಟ್: ಬಿಜೆಪಿ

ರಾಜ್ಯ ಬಜೆಟ್ ಕುರಿತು ಬಿಜೆಪಿ ಕಟುವಾಗಿ ಟೀಕಿಸಿದೆ.

ಜಾಹೀರಾತು

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರೈತರ ಸಾಲ ಮನ್ನಾ ಮಾಡಲು ಕ್ರಮ ಕೈಗೊಳ್ಳದೇ ಇದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.   ಬಜೆಟ್ ನಲ್ಲಿ ಸಾಲ ಮನ್ನಾ ಮಾಡುತ್ತಾರೆಂಬ ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಗಿದೆ. ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿಲ್ಲ. ಸಾಲ ಮನ್ನಾ ಮಾಡದೇ ಇರುವುದಕ್ಕೆ ರೈತ ಸಮುದಾಯದಲ್ಲಿ ಆತಂಕ ಉಂಟಾಗಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಕೂಡಲೇ ರೈತರ ಸಾಲ ಮನ್ನಾ ಮಾಡುವುದಕ್ಕೆ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ. ನಾವು ಅಧಿಕಾರದಲ್ಲಿರಬೇಕಾದರೆ ಅಂದಿನ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡದೇ 2 ಬಾರಿ ಸಾಲ ಮನ್ನಾ ಮಾಡಿದ್ದೆವು. ಆದ್ದರಿಂದ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದತ್ತ ಕೈತೋರಿಸದೇ ಸಾಲ ಮನ್ನಾ ಮಾಡಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ.

………………

ನೀರಸ ಬಜೆಟ್: ದೇವದಾಸ ಶೆಟ್ಟಿ

ಜಾಹೀರಾತು

ಸರ್ವರನ್ನು ಸಮಾಧಾನ ಪಡಿಸಲು ಯತ್ನಿಸಿದಂತಹ ನೀರಸ ಬಜೆಟ್ . ಬರ ದಿಂದ ರೈತ ಕಂಗೆಟ್ಟಿದ್ದರೂ  ಸಾಲಮನ್ನಾವಲ್ಲ ಕನಿಷ್ಟ ಬಡ್ಡಿ ಮನ್ನಾ ಮಾಡುವ, ರೈತರಿಗೆ ನಾವಿದ್ದೇವೆ ಎನ್ನುವ ಕನಿಷ್ಟ  ಧೈರ್ಯವನ್ನು ನೀಡದ ಸರಕಾರ. ದಕ್ಷಿಣ ಕನ್ನಡಕ್ಕೆ ಏನೊಂದು ಪರಿಣಾಮಕಾರಿ ಯೋಜನೆ ನೀಡದ ಗಜೆಟ್ ಎಂದು ಬಿಜೆಪಿ ಬಂಟ್ವಾಳ ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ರಾಜ್ಯ ಬಜೆಟ್ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ