ಬಂಟ್ವಾಳ

ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ

ಇಂಧನ, ಅಡುಗೆ ಅನಿಲ ಸಹಿತ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರಕಾರದ ಜನ ವಿರೋಧಿ ನೀತಿ ವಿರುದ್ಧ ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಯಿತು.

ಕೇಂದ್ರ ನೀತಿಯಿಂದ ಜನಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ ಹೇಳಿದರು. ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆದ್ದಿರುವುದು ಆಡಳಿತ ವಿರೋಧಿ ಅಲೆಯಿಂದ, ಪಂಜಾಬ್ ಮತ್ತು ಮಣಿಪುರದಲ್ಲಿ ಕಾಂಗ್ರೆಸ್ ಗೆದ್ದಿದ್ದರೂ ಅಲ್ಲಿ ಸರಕಾರವನ್ನು ಹೈಜಾಕ್ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ, ಯುಪಿಎ ಸರಕಾರ ಇದ್ದಾಗ ಬಿಜೆಪಿಯವರು ಬೆಲೆ ಏರಿಕೆ ವಿರುದ್ಧ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.
ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸಬೇಕಾದ ಬದಲು ಬೆಲೆ ಏರಿಕೆ ಹಾಗೂ ಸೇವಾ ತೆರಿಗೆಯನ್ನು ಶೇ. ೧೫ರಷ್ಟು ಏರಿಸಿ ಎಲ್ಲಾ ವಸ್ತುಗಳ ಬೆಲೆಯನ್ನು ಇನ್ನಷ್ಟು ಹೆಚ್ಚಿಸುವಂತೆ ಮಾಡಿದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಗಣನೀಯವಾಗಿ ಕುಸಿದಿದ್ದರೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರುತ್ತಲೇ ಇದೆ. ಜೊತೆಗೆ ಜೀವನಾವಶ್ಯಕ ವಸ್ತುಗಳ ಬೆಲೆಯೂ ಗಗನಕ್ಕೆ ಏರುತ್ತಿರುವುದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ ಎಂದರು.
ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಬಹುಮತ ಹೊಂದಿದ್ದರೂ ಹಿಂಭಾಗಿಲ ಮೂಲಕ ಬಿಜೆಪಿ ಅಽಕಾರವನ್ನು ಪಡೆದಿರುವುದು ಪ್ರಜಾಪ್ರಭೂತ್ವದ ಕಗ್ಗೊಲೆ ಎಂದು ವಾಗ್ದಾಳಿ ನಡೆಸಿದ ಅವರು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ವರ್ಗದ ಜನರಿಗೆ ಅನುಕೂಲಕರವಾದ ಜನಪ್ರೀಯ ಬಜೆಟನ್ನು ಮಂಡಿಸಿದ್ದು ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು ಸಿದ್ದರಾಮಯ್ಯರವರೇ ಸಿಎಂ ಆಗಲಿದ್ದಾರೆ ಎಂದು ನುಡಿದರು.
ಈ ಸಂದರ್‍ಭ ಮಾತನಾಡಿದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಆಲಿ, ಕಾಂಗ್ರೆಸ್ ಮುಕ್ತ ಭಾರತವನ್ನು ಯಾರಿಂದಲೂ ಮಾಡಲು ಅಸಾಧ್ಯ ಎಂದರು. ಕೇಂದ್ರ ನೀತಿ ವಿರುದ್ಧ ಪ್ರತಿಭಟನೆಯನ್ನು ಪ್ರತಿ ಬೂತ್ ನಲ್ಲಿ ಮಾಡಲಾಗುವುದು. ಈ ಮೂಲಕ ಕೇಂದ್ರ ನೀತಿ ವಿರುದ್ಧ ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಅಬ್ಬಾಸ್ ಆಲಿ ಹೇಳಿದರು.
ರೈ ಶಿಫಾರಸು:
ಪಶ್ಚಿಮವಾಹಿನಿ ಯೋಜನೆ ಕೈಗೆತ್ತಿಕೊಳ್ಳುವಂತೆ ಸಚಿವ ಬಿ.ರಮಾನಾಥ ರೈ ಮುಖ್ಯಮಂತ್ರಿ ಜೊತೆ ಸಮಾಲೋಚಿಸಿದ ಫಲವೇ ಬಜೆಟ್ ನಲ್ಲಿ ಕ್ರಿಯಾಯೋಜನೆಗಾಗಿ ನೂರು ಕೋಟಿ ತೆಗೆದಿರಿಸಲಾಗಿದೆ ಎಂದು ಅಬ್ಬಾಸ್ ಆಲಿ ಹೇಳಿದರು.
ಜಿಪಂ ಸದಸ್ಯರಾದ ಮಮತ ಗಟ್ಟಿ, ಮಂಜುಳಾ ಮಾವೆ, ದ.ಕ. ಜಿಲ್ಲಾ ಎಸ್ಸಿ-ಎಸ್ಟಿ ಘಟಕದ ಅಧ್ಯಕ್ಷ ಪದ್ಮನಾಭ ನರಿಂಗಾನ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಉಮಾನಾಥ ಶೆಟ್ಟಿ, ಜಗದೀಶ ಕೊಲ ಮೊದಲಾದವರು ಸಭೆಯನ್ನುದ್ದೇಶಿಸಿ ಮಾತನಾಡಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಯೋಜನಾ ಪ್ರಾಕಾರದ ಮಾಜಿ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್, ಜಿಪಂ ಸದಸ್ಯ ಪದ್ಮಶೇಖರ ಜೈನ್, ಪುರಸಭೆ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಪುರಸಭಾ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಮೆಸ್ಕಾಂ ನಿರ್‍ದೇಶಕಿ ಮಲ್ಲಿಕಾ ಪಕ್ಕಳ, ಜಯಂತಿ ಅನಂತಾಡಿ, ಎಂ.ಪರಮೇಶ್ವರ, ಜನಾರ್‍ದನ ಚಂಡ್ತಿಮಾರ್, ಪ್ರಶಾಂತ ಕುಲಾಲ್, ರಾಜಶೇಖರ ನಾಯಕ್, ಪಿ.ಜಿನರಾಜ ಆರಿಗ, ತಾಪಂ ಸದಸ್ಯ ಉಸ್ಮಾನ್ ಕರೋಪಾಡಿ, ಎಪಿಎಂಸಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಜಿಲ್ಲಾ ಸೇವಾ ದಳದ ಸದಸ್ಯ ವೆಂಕಪ್ಪ ಪೂಜಾರಿ, ದ.ಕ. ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಬಿ.ಸಿ.ರೋಡ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮುಹಮ್ಮದ್ ನಂದಾವರ, ಮಂಜುಳಾ ಕುಶಲ ಪೆರಾಜೆ, ಗಾಯತ್ರಿ ರವೀಂದ್ರ ಸಫಲ್ಯ, ಕುಮಾರ ಭಟ್, ನಸೀಮಾ, ಶೋಭಾ ರೈ, ಶಿವಪ್ರಸಾದ ಕನಪಾಡಿ, ಮಧೂಸೂಧನ ಶೆಣೈ, ರಾಜು ಕೋಟ್ಯಾನ್, ಆಲ್ಬರ್‍ಟ್ ಮಿನೇಜಸ್, ಐಡಾ ಸುರೇಶ್, ರಿಯಾಜ್ ಬಂಟ್ವಾಳ, ಪದ್ಮರಾಜ ಬಲ್ಲಾಳ, ದಿವಾಕರ ಪಂಬದಬೆಟ್ಟು, ಈಶ್ವರ ಪೂಜಾರಿ ಹಿರ್‍ತಡ್ಕ, ಮಲ್ಲಿಕಾ ಶೆಟ್ಟಿ, ಪ್ರಭಾಕರ ಪ್ರಭು, ಪದ್ಮಾವತಿ, ಮಂಜುಳಾ ಸದಾನಂದ, ಸೇರಿದಂತೆ ತಾಪಂ, ಬಂಟ್ವಾಳ ಪುರಸಭೆ, ತಾಲೂಕಿನ ವಿವಿಧ ಗ್ರಾಪಂ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ ಪ್ರಸ್ತಾವಿಸಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ